Mysore
25
broken clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ರಾಮೇಶ್ವರಂ ಕೆಫೆ ಬಾಂಬ್‌ ಪ್ರಕರಣ: ಬಿಜೆಪಿ ಕಾರ್ಯಕರ್ತ ಎನ್‌ಐಎ ವಶಕ್ಕೆ!

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ತೀವ್ರಗೊಳಿಸಿದ್ದು, ಇದೀಗ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಸಾಯಿಪ್ರಸಾದ್‌ ಎಂಬಾತನನ್ನು ಇಂದು(ಏಪ್ರಿಲ್‌ 5) ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಬೈಲ್‌ ಮಾರಾಟ ಮಳಿಗೆ ಮೇಲೆ ದಾಳಿ ಮಾಡಿದ್ದ ಎನ್‌ಐಎ ಅಧಿಕಾರಿಗಳು, ಇದೀಗ ತೀರ್ಥಹಳ್ಳಿಯ ಬಿಜೆಪಿ ಘಟಕದ ಕಾರ್ಯದರ್ಶಿಯಾಗಿರುವ ಸಾಯಿಪ್ರಸಾದ್‌ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಮಾರ್ಚ್‌ 27ರಂದು ಇಂಬ್ರೇಜ್‌ ಮಾಲೀಕತ್ವದ ಡಿಜೆಟಲ್‌ ಜೋನ್‌ ಮೊಬೈಲ್‌ ಮಳಿಗೆ ಮೇಲೆ ಎನ್‌ಐಎ ದಾಳಿ ಮಾಡಿತ್ತು. ದಾಳಿ ವೇಳೆ ಸಾಯಿಪ್ರಸಾದ್‌ ಸಂಬಂಧದ ಬಗ್ಗೆ ಎನ್‌ಐಎಗೆ ಮಾಹಿತಿ ಸಿಕ್ಕಿದೆ. ಮೊಬೈಲ್‌ ಅಂಗಡಿ ಮಾಲೀಕನಿಗೆ ಸಾಯಿಪ್ರಸಾದ್‌ ಸ್ನೇಹಿತ. ಇದೇ ಆಧಾರದ ಮೇಲೆ ಎನ್‌ಐಎ ಅಧಿಕಾರಿಗಳು ಸಾಯಿಪ್ರಸಾದ್‌ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.

ಈ ಬಗ್ಗೆ ಟ್ಟಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್‌ ಎಂಬಾತನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಅನ್ನುವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಕಾರ್ಯಕರ್ತನನ್ನು ಎನ್‌ಐಎ ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥ ಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೇ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಆರಸ್ಸೆಸ್‌ ಸಿದ್ದಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದ್ಕೇನು ಹೇಳುತ್ತದೆ? ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್‌ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈ ಉತ್ತರ ನೀಡಲೇಬೇಕು ಎಂದು ಸಚಿವರು ಒತ್ತಾಯಿಸಿದ್ದಾರೆ.

Tags: