ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ತೀವ್ರಗೊಳಿಸಿದ್ದು, ಇದೀಗ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಸಾಯಿಪ್ರಸಾದ್ ಎಂಬಾತನನ್ನು ಇಂದು(ಏಪ್ರಿಲ್ 5) ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಬೈಲ್ ಮಾರಾಟ ಮಳಿಗೆ ಮೇಲೆ ದಾಳಿ ಮಾಡಿದ್ದ ಎನ್‌ಐಎ ಅಧಿಕಾರಿಗಳು, ಇದೀಗ ತೀರ್ಥಹಳ್ಳಿಯ ಬಿಜೆಪಿ ಘಟಕದ ಕಾರ್ಯದರ್ಶಿಯಾಗಿರುವ ಸಾಯಿಪ್ರಸಾದ್‌ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಮಾರ್ಚ್ 27ರಂದು ಇಂಬ್ರೇಜ್ ಮಾಲೀಕತ್ವದ ಡಿಜೆಟಲ್ ಜೋನ್ ಮೊಬೈಲ್ ಮಳಿಗೆ ಮೇಲೆ ಎನ್‌ಐಎ ದಾಳಿ ಮಾಡಿತ್ತು. ದಾಳಿ ವೇಳೆ ಸಾಯಿಪ್ರಸಾದ್ ಸಂಬಂಧದ ಬಗ್ಗೆ ಎನ್‌ಐಎಗೆ ಮಾಹಿತಿ ಸಿಕ್ಕಿದೆ. ಮೊಬೈಲ್ ಅಂಗಡಿ ಮಾಲೀಕನಿಗೆ ಸಾಯಿಪ್ರಸಾದ್ ಸ್ನೇಹಿತ. ಇದೇ ಆಧಾರದ ಮೇಲೆ ಎನ್‌ಐಎ ಅಧಿಕಾರಿಗಳು ಸಾಯಿಪ್ರಸಾದ್‌ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.
ಈ ಬಗ್ಗೆ ಟ್ಟಿಟರ್‌ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ ಎಂಬಾತನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಅನ್ನುವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಕಾರ್ಯಕರ್ತನನ್ನು ಎನ್‌ಐಎ ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥ ಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೇ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಆರಸ್ಸೆಸ್ ಸಿದ್ದಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದ್ಕೇನು ಹೇಳುತ್ತದೆ? ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈ ಉತ್ತರ ನೀಡಲೇಬೇಕು ಎಂದು ಸಚಿವರು ಒತ್ತಾಯಿಸಿದ್ದಾರೆ.
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…