Mysore
26
scattered clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ರಾಮೇಶ್ವರಂ ಕೆಫೆ ಪ್ರಕರಣ: ಬಾಂಬರ್‌ ಯಾರೆಂಬುದು ಗೊತ್ತಾಗಿದೆ: ಜಿ ಪರಮೇಶ್ವರ್‌

ಬೆಂಗಳೂರು: ಬೆಂಗಳೂರಿನ ಹೆಸರಾಂತ ರಾಮೇಶ್ವರಂ ಕೆಫೆಯ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಒಂದು ಹಂತಕ್ಕೆ ಗುರುತಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಂಬರ್​ ಯಾರೆಂಬುದು ಒಂದು ಹಂತಕ್ಕೆ ಪತ್ತೆ ಆಗಿದೆ. ಅದನ್ನು ದೃಢಪಡಿಸಿಕೊಳ್ಳಬೇಕಿದೆ. ಈ ಕೆಲಸವನ್ನು ಸಿಸಿಬಿ, ಎನ್‌ಐಎ ಅವರು ಮಾಡುತ್ತಿದ್ದಾರೆ ಎಂದು ವಿವರಿಸಿದರು.

ಅನಂತಕುಮಾರ್ ಹೆಗಡೆ ಅವರ ಸಂವಿಧಾನ ತಿದ್ದುಪಡಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಪ್ರಧಾನಿಯವರು ಅಂಬೇಡ್ಕರ್ ಸಂವಿಧಾನ ಕೊಟ್ಟಿದ್ದನ್ನು ಶ್ಲಾಘಿಸಿದ್ದಾರೆ. ಆದರೆ, ಅವರ ಪಕ್ಷದ ಸಂಸದ ಸಂವಿಧಾನ ಬದಲು ಮಾಡುತ್ತೇವೆ ಎನ್ನುತ್ತಿದ್ದಾರೆ. ಈ ಹಿಂದೆಯೂ ಹಲವು ಬಾರಿ ಸಂಸದ ಅನಂತಕುಮಾರ್ ಹೆಗಡೆ ಹೀಗೆ ಹೇಳಿದ್ದಾರೆ. ಕೇವಲ ಸಂಸದ​ ಹಗಡೆ ಹೇಳಿಕೆಯಿಂದ ದೂರ ಇದ್ದೇವೆ ಎಂದರೆ ಸಾಲದು. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಸಂವಿಧಾನವನ್ನೇ ‌ಬದಲಿಸುತ್ತೇವೆ ಎಂಬುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದರು.

ಇನ್ನು ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ಇಂದು ಉಳಿದ 21 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ದೊರೆಯಲಿದೆ. ಅಭ್ಯರ್ಥಿಗಳ ಬಗ್ಗೆ ಸಂಜೆ ಅಂತಿಮವಾಗಿ ತಿಳಿಯಲಿದೆ ಎಂದು ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ