ಬೆಂಗಳೂರು: ಬೆಂಗಳೂರಿನ ಹೆಸರಾಂತ ರಾಮೇಶ್ವರಂ ಕೆಫೆಯ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಒಂದು ಹಂತಕ್ಕೆ ಗುರುತಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಂಬರ್ ಯಾರೆಂಬುದು ಒಂದು ಹಂತಕ್ಕೆ ಪತ್ತೆ ಆಗಿದೆ. ಅದನ್ನು ದೃಢಪಡಿಸಿಕೊಳ್ಳಬೇಕಿದೆ. ಈ ಕೆಲಸವನ್ನು ಸಿಸಿಬಿ, ಎನ್‌ಐಎ ಅವರು ಮಾಡುತ್ತಿದ್ದಾರೆ ಎಂದು ವಿವರಿಸಿದರು.
ಅನಂತಕುಮಾರ್ ಹೆಗಡೆ ಅವರ ಸಂವಿಧಾನ ತಿದ್ದುಪಡಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಪ್ರಧಾನಿಯವರು ಅಂಬೇಡ್ಕರ್ ಸಂವಿಧಾನ ಕೊಟ್ಟಿದ್ದನ್ನು ಶ್ಲಾಘಿಸಿದ್ದಾರೆ. ಆದರೆ, ಅವರ ಪಕ್ಷದ ಸಂಸದ ಸಂವಿಧಾನ ಬದಲು ಮಾಡುತ್ತೇವೆ ಎನ್ನುತ್ತಿದ್ದಾರೆ. ಈ ಹಿಂದೆಯೂ ಹಲವು ಬಾರಿ ಸಂಸದ ಅನಂತಕುಮಾರ್ ಹೆಗಡೆ ಹೀಗೆ ಹೇಳಿದ್ದಾರೆ. ಕೇವಲ ಸಂಸದ ಹಗಡೆ ಹೇಳಿಕೆಯಿಂದ ದೂರ ಇದ್ದೇವೆ ಎಂದರೆ ಸಾಲದು. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಸಂವಿಧಾನವನ್ನೇ ಬದಲಿಸುತ್ತೇವೆ ಎಂಬುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಇನ್ನು ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ಇಂದು ಉಳಿದ 21 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ದೊರೆಯಲಿದೆ. ಅಭ್ಯರ್ಥಿಗಳ ಬಗ್ಗೆ ಸಂಜೆ ಅಂತಿಮವಾಗಿ ತಿಳಿಯಲಿದೆ ಎಂದು ತಿಳಿಸಿದರು.
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…