ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ರಾಮೇಶ್ವರಂ ಕೆಫೆ ಮೇಲಿನ ಬಾಂಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪ್ರಕರಣದ ಪ್ರಮುಖ ಆರೋಪಿ ಹಾಗೂ ಬಾಂಬರ್‌ನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಬಾಂಬ್ ಮುಸ್ಸಾವಿರ್ ಹುಸೇನ್ ಹಾಗೂ ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಪಶ್ಚಿಮ ಬಂಗಾಳದಲ್ಲಿ ಎನ್‌ಐಎ ಬಂಧಿಸಿದೆ.
ಗುಪ್ತಚರ ಇಲಾಖೆಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಬಂಗಾಳಕ್ಕೆ ತೆರಳಿದ ಎನ್‌ಐಎ ತಂಡ ಅವರನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈ ದಾಳಿಕೋರರು ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯದಲ್ಲಿ ತಲೆ ಮರೆಸಿಕೊಂಡಿದ್ದರು ಎಂದು ಹೇಳಲಾಗಿತ್ತು. ಇನ್ನು ಅವರ ಬಂಧನದ ಬಗ್ಗೆ ತನಿಖಾ ದಳ ಇನ್ನಷ್ಟೇ ಅಧಿಕೃತ ಹೇಳಿಕೆ ನೀಡಬೇಕಿದೆ.





