ರಾಜ್ಯ

ರಾಮೇಶ್ವರಂ ಕೆಫೆ ಪ್ರಕರಣ: ಬಂಗಾಳದಲ್ಲಿ ಪ್ರಮುಖ ಆರೋಪಿ ಬಂಧಿಸಿದ ಎನ್‌ಐಎ!

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ರಾಮೇಶ್ವರಂ ಕೆಫೆ ಮೇಲಿನ ಬಾಂಬ್‌ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪ್ರಕರಣದ ಪ್ರಮುಖ ಆರೋಪಿ ಹಾಗೂ ಬಾಂಬರ್‌ನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಾಂಬ್‌ ಮುಸ್ಸಾವಿರ್‌ ಹುಸೇನ್‌ ಹಾಗೂ ಸ್ಫೋಟದ ಮಾಸ್ಟರ್‌ ಮೈಂಡ್‌ ಅಬ್ದುಲ್‌ ಮತೀನ್‌ ತಾಹಾನನ್ನು ಪಶ್ಚಿಮ ಬಂಗಾಳದಲ್ಲಿ ಎನ್‌ಐಎ ಬಂಧಿಸಿದೆ.

ಗುಪ್ತಚರ ಇಲಾಖೆಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಬಂಗಾಳಕ್ಕೆ ತೆರಳಿದ ಎನ್‌ಐಎ ತಂಡ ಅವರನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈ ದಾಳಿಕೋರರು ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯದಲ್ಲಿ ತಲೆ ಮರೆಸಿಕೊಂಡಿದ್ದರು ಎಂದು ಹೇಳಲಾಗಿತ್ತು. ಇನ್ನು ಅವರ ಬಂಧನದ ಬಗ್ಗೆ ತನಿಖಾ ದಳ ಇನ್ನಷ್ಟೇ ಅಧಿಕೃತ ಹೇಳಿಕೆ ನೀಡಬೇಕಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

13 mins ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

58 mins ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

1 hour ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

3 hours ago

ವರದಿ ಬಿಟ್ಟು ಕ್ಷೇತ್ರ ಭೇಟಿ ಮಾಡಿ : ಅಧಿಕಾರಿಗಳಿಗೆ ಎಚ್‌ಡಿಕೆ ಸೂಚನೆ

ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…

3 hours ago

ಗೆಲ್ಲಿಸಿಕೊಂಡು ಬರಲಿ ನೋಡೋಣ : ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು

ಮೈಸೂರು : ನಾನು ಅಹಿಂದ ಚಾಂಪಿಯನ್‌ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್‌ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…

3 hours ago