Mysore
23
moderate rain
Light
Dark

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ: ಇಬ್ಬರನ್ನು ಬಂಧಿಸಿ ಎನ್‌ಐಎ!

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರು ಶಂಕಿತರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

ಈ ಇಬ್ಬರನ್ನು ಶನಿವಾರ (ಮಾ.23) ಸಂಜೆ ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಈ ಇಬ್ಬರು ಬಾಂಬರ್​ ಜೊತೆ ನೇರ ಸಂಪರ್ಕದಲ್ಲಿದ್ದರು ಎಂಬುವುದು ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ಅಧಿಕಾರಿಗಳು ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಮಾರ್ಚ್​ 01 ರಂದು ಬೆಂಗಳೂರಿನ ವೈಟ್​ಫಿಲ್ಡ್​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಸಂಭವಿಸಿತ್ತು. ಈ ಪ್ರಕರಣವನ್ನು ಪ್ರಾರಂಭದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಬಳಿಕ ಪ್ರಕರಣ ತನಿಖೆಯನ್ನು ಎನ್​ಐಎಗೆ ರಾಜ್ಯ ಸರ್ಕಾರ ವರ್ಗಾಯಿಸಿತ್ತು. ಈ ಪ್ರಕರಣ ಸಂಬಂಧ ಮಾ.13 ರಂದು ಎನ್​ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ಶಬ್ಬೀರ್ ಎಂಬಾತನನ್ನು ಬಂಧಿಸಿದ್ದರು. ಈಗ ಬೆಂಗಳೂರು ಮೂಲದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.