ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರು ಶಂಕಿತರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ.
ಈ ಇಬ್ಬರನ್ನು ಶನಿವಾರ (ಮಾ.23) ಸಂಜೆ ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಈ ಇಬ್ಬರು ಬಾಂಬರ್ ಜೊತೆ ನೇರ ಸಂಪರ್ಕದಲ್ಲಿದ್ದರು ಎಂಬುವುದು ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ಅಧಿಕಾರಿಗಳು ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ.
ಮಾರ್ಚ್ 01 ರಂದು ಬೆಂಗಳೂರಿನ ವೈಟ್ಫಿಲ್ಡ್ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಸಂಭವಿಸಿತ್ತು. ಈ ಪ್ರಕರಣವನ್ನು ಪ್ರಾರಂಭದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಬಳಿಕ ಪ್ರಕರಣ ತನಿಖೆಯನ್ನು ಎನ್ಐಎಗೆ ರಾಜ್ಯ ಸರ್ಕಾರ ವರ್ಗಾಯಿಸಿತ್ತು. ಈ ಪ್ರಕರಣ ಸಂಬಂಧ ಮಾ.13 ರಂದು ಎನ್‌ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ಶಬ್ಬೀರ್ ಎಂಬಾತನನ್ನು ಬಂಧಿಸಿದ್ದರು. ಈಗ ಬೆಂಗಳೂರು ಮೂಲದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…