ಶಿವಮೊಗ್ಗ: ಮುಸ್ಲಿಮರ ಓಲೈಕೆಗಾಗಿಯೇ ರಾಮನಗರ ಹೆಸರನ್ನು ಬದಲಾವಣೆ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಈ ಬಗ್ಗೆ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೂರು ಉಪಚುನಾವಣೆ ಎದುರಾಗುತ್ತಿವೆ. ಚುನಾವಣೆಯಲ್ಲಿ ಮುಸ್ಲಿಮರನ್ನು ಸಂತೃಪ್ತಿಪಡಿಸಲು ಮತ್ತು ಮುಸ್ಲಿಮರನ್ನು ಓಲೈಕೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.
ರಾಮ ಎನ್ನುವ ಹೆಸರಿದ್ದರೆ ನಿಮಗೆ ಏನಾದರೂ ಸಮಸ್ಯೆ ಆಗುತ್ತಾ ಎಂದು ಪ್ರಶ್ನಿಸಿದ ಅವರು, ಹಿಂದುತ್ವದ ಹೆಸರು ಬಂದರೆ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ದೆವ್ವ ಬಂದಹಾಗೆ ಆಗುತ್ತದೆ ಎಂದು ಕಿಡಿಕಾರಿದರು.
ಇಡೀ ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ರೈತರು ಸಂಪೂರ್ಣ ಸಂಕಷ್ಟದಲ್ಲಿ ಇದ್ದಾರೆ. ಆದರೂ ಸರ್ಕಾರ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಬಿಟ್ಟಿ ಯೋಜನೆಗಳನ್ನು ತಂದು ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅಭಿವೃದ್ಧಿ ಕೆಲಸಗಳು ಸಂಪೂರ್ಣ ನಿಂತುಹೋಗಿವೆ ಎಂದು ಕಿಡಿಕಾರಿದರು.





