ರಾಜ್ಯ

ಬಿಎಸ್‌ವೈ , ದರ್ಶನ್‌, ಸೂರಜ್‌, ಪ್ರಜ್ವಲ್‌ ವಿರುದ್ಧ ನಟಿ ರಮ್ಯಾ ಕೆಂಡಾಮಂಡಲ!

ನಟ ದರ್ಶನ್, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ, ಪ್ರಜ್ವಲ್‌ ಹಾಗೂ ಸೂರಜ್‌ ರೇವಣ್ಣ ವಿರುದ್ಧ ವಿವಿಧ ಆರೋಪಗಳು ಕೇಳಿಬಂದಿದ್ದು ಈ ಕುರಿತು ನಟಿ ರಮ್ಯಾ ಕಿಡಿಕಾರಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಮ್ಯಾ ಕಾನೂನನ್ನು ಉಲ್ಲಂಘಿಸುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು ಹಾಗೂ ಅವರ ಹಿಂಸಾತ್ಮಕ ಕೃತ್ಯಗಳಿಗೆ ಗುರಿಯಾಗುವವರು ಮಾತ್ರ ಬಡವರು, ಮಹಿಳೆಯರು ಮತ್ತು ಮಕ್ಕಳು ಕರ್ನಾಟಕದ ಸಾಮಾನ್ಯ ಜನರು ಎಂದು ಬರೆದುಕೊಂಡು ಕಿಡಿಕಾರಿದ್ದಾರೆ.

ಈ ಅಪರಾಧಗಳನ್ನು ಹೊರತಂದ ಪೊಲೀಸರು ಹಾಗೂ ಮಾಧ್ಯಮಗಳಿಗೆ ಹ್ಯಾಟ್ಸ್‌ ಆಫ್.‌ ವಿಚಾರಣೆಯನ್ನು ತ್ವರಿತಗೊಳಿಸಿದಾಗ ಮತ್ತು ಪ್ರಕರಣಗಳನ್ನ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಾಗ ಮಾತ್ರ ನಿಜವಾಗಿಯೂ ನ್ಯಾಯ ಸಿಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನ ನೀಡುತ್ತೇವೆ ಎಂದೂ ಸಹ ಉಲ್ಲೇಖಿಸಿದ್ದಾರೆ.

andolana

Recent Posts

ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…

7 mins ago

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…

12 mins ago

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ಆಕಾಂಕ್ಷಿಗಳ ಕಸರತ್ತು

ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …

18 mins ago

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

11 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

11 hours ago