ರಾಜ್ಯ

ಶಾಸಕರ ಜೊತೆ ರಣದೀಪ್‌ ಸಿಂಗ್‌ ಸುರ್ಜೇವಾಲಾ ಪ್ರತ್ಯೇಕ ಸಭೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾಹಿತಿ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಶಾಸಕರ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಣದೀಪ್ ಸಿಂಗ್ ಸುರ್ಜೇವಾಲ ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಶಾಸಕರ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸುತ್ತಾರೆ. ಈ ಬಗ್ಗೆ ರಣದೀಪ್ ಸಿಂಗ್ ಸುರ್ಜೇವಾಲ ಅವರ ಕಚೇರಿಯಿಂದಲೇ ನೇರವಾಗಿ ಶಾಸಕರಿಗೆ ಮಾಹಿತಿ ಹೋಗಿದೆ. ನನಗೂ ಕಾರ್ಯಕ್ರಮದ ವೇಳಾಪಟ್ಟಿ ಕಳುಹಿಸಿದ್ದಾರೆ. ಅದರಂತೆ ನಾನು ಶಾಸಕರಿಗೆ ವಿಷಯ ತಿಳಿಸುತ್ತಿದ್ದೇನೆ ಎಂದು ಹೇಳಿದರು.

ಇನ್ನು ದಸರಾ ವೇಳೆಗೆ ಮುಖ್ಯಮಂತ್ರಿ ಬದಲಾಗುತ್ತಾರೆ. ನೂತನ ಮುಖ್ಯಮಂತ್ರಿ ದಸರಾ ಉದ್ಘಾಟಿಸುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅಶೋಕ್ ಜೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ, ನಾನು ಭವಿಷ್ಯ ಕೇಳುವುದಿದೆ. ಅವರನ್ನು ಭೇಟಿ ಮಾಡುತ್ತೇನೆ ಎಂದು ಮಾರ್ಮಿಕವಾಗಿ ಹೇಳಿದರು.

ಇನ್ನು ಕಾವೇರಿ ಆರತಿ ಕುರಿತು ಹೈಕೋರ್ಟ್ ನೋಟಿಸ್‌ಗೆ ಕಾನೂನು ಪ್ರಕಾರವೇ ಉತ್ತರ ನೀಡುತ್ತೇವೆ. ಆರತಿ ವಿಚಾರಕ್ಕೆ ಯಾರು ಅನುಮತಿ ಕೇಳುತ್ತಿಲ್ಲ. ದಿನಾ ಅಲ್ಲಿ ಆರತಿ, ಪೂಜೆ ನಡೆಯುತ್ತಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

2 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

5 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

6 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

6 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

6 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

6 hours ago