Mysore
20
mist

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ರಣದೀಪ್‌ ಸಿಂಗ್‌ ಸುರ್ಜೇವಾಲ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಅಧಿಕಾರ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಬಣಗಳ ಮುಸುಕಿನ ಗುದ್ದಾಟಗಳು ನಡೆಯುತ್ತಿವೆ ಎಂಬ ವದಂತಿಗಳಿಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ತೆರೆ ಎಳೆದಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.13) ಈ ವಿಚಾರದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ರಾಜ್ಯದಲ್ಲಿ ಈಗಾಗಲೇ ಸಿಎಂ ಹುದ್ದೆಯಲ್ಲಿ ಸಿದ್ದರಾಮಯ್ಯ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿಯೂ ಅವರ ನೇತೃತ್ವದಲ್ಲೇ ಆಡಳಿತ ನಿರ್ವಹಣೆಯಾಗುತ್ತದೆ ಎಂದು ಹೇಳಿದರು.

ಈ ವಿಚಾರದಲ್ಲಿ ಕೆಲ ಸೆಲೆಕ್ಟೆಡ್‌ ಗ್ರೂಫ್‌ ಆಫ್‌ ಮೀಡಿಯಾದಿಂದ ಇತರ ಗೊಂದಲಗಳು ಸೃಷ್ಠಿಯಾಗಿದೆ ಅಷ್ಟೇ. ಅದನ್ನು ಹೊರತುಪಡಿಸಿ ಕಾಂಗ್ರೆಸ್‌ ಸರ್ಕಾರದಲ್ಲಿ ಎಲ್ಲಾ ಸಚಿವರು ಮತ್ತು ಶಾಸಕರೂ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರದ ಅಧಿಕಾರದಲ್ಲಿ ಯಾವುದೇ ಬದಲಾವಣೆ ಹಾಗೂ ಹೊಸ ನೇಮಕವಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನೂ ಬಿಜೆಪಿ ಅವರು ಮಾತ್ರ ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Tags:
error: Content is protected !!