ಬೆಂಗಳೂರು: ರಾಜ್ಯದಲ್ಲಿ ಸಿಎಂ ಅಧಿಕಾರ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬಣಗಳ ಮುಸುಕಿನ ಗುದ್ದಾಟಗಳು ನಡೆಯುತ್ತಿವೆ ಎಂಬ ವದಂತಿಗಳಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ತೆರೆ ಎಳೆದಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಜನವರಿ.13) ಈ ವಿಚಾರದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ರಾಜ್ಯದಲ್ಲಿ ಈಗಾಗಲೇ ಸಿಎಂ ಹುದ್ದೆಯಲ್ಲಿ ಸಿದ್ದರಾಮಯ್ಯ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿಯೂ ಅವರ ನೇತೃತ್ವದಲ್ಲೇ ಆಡಳಿತ ನಿರ್ವಹಣೆಯಾಗುತ್ತದೆ ಎಂದು ಹೇಳಿದರು.
ಈ ವಿಚಾರದಲ್ಲಿ ಕೆಲ ಸೆಲೆಕ್ಟೆಡ್ ಗ್ರೂಫ್ ಆಫ್ ಮೀಡಿಯಾದಿಂದ ಇತರ ಗೊಂದಲಗಳು ಸೃಷ್ಠಿಯಾಗಿದೆ ಅಷ್ಟೇ. ಅದನ್ನು ಹೊರತುಪಡಿಸಿ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲಾ ಸಚಿವರು ಮತ್ತು ಶಾಸಕರೂ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರದ ಅಧಿಕಾರದಲ್ಲಿ ಯಾವುದೇ ಬದಲಾವಣೆ ಹಾಗೂ ಹೊಸ ನೇಮಕವಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನೂ ಬಿಜೆಪಿ ಅವರು ಮಾತ್ರ ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…