Randeep Singh Surjewala to Hold Talks with Ministers Again on July 17
ಬೆಂಗಳೂರು: ಶಾಸಕರುಗಳ ಜೊತೆ ಪ್ರತ್ಯೇಕವಾಗಿ ಒಟ್ಟು 6 ದಿನಗಳ ಕಾಲ ಅಭಿಪ್ರಾಯ ಸಂಗ್ರಹಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಇದೇ ತಿಂಗಳ 16 ರಂದು ಸಚಿವರ ಜೊತೆ ಚರ್ಚೆ ನಡೆಸುವ ಮೂಲಕ ಮೌಲ್ಯಮಾಪನಕ್ಕೆ ಮುಂದಾಗಿದ್ದಾರೆ.
ಸುರ್ಜೇವಾಲ ಅವರ ಕಾರ್ಯವೈಖರಿಗೆ ಕಾಂಗ್ರೆಸ್ ಪಕ್ಷದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ರಾಜ್ಯದಲ್ಲಿ ಸಿದ್ದರಾಮಯ್ಯ ಪ್ರಭಾವಿ ನಾಯಕರಾಗಿದ್ದು, ಅವರನ್ನೂ ದೂರ ಇಟ್ಟು ಸುರ್ಜೇವಾಲ ನೇರವಾಗಿ ಕಾಂಗ್ರೆಸ್ ಶಾಸಕರ ಜೊತೆ ಅಭಿಪ್ರಾಯ ಸಂಗ್ರಹಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಶಾಸಕರಿಗೆ ತಮ್ಮ ಅಹವಾಲು ಹೇಳಿಕೊಳ್ಳಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಸುಲಭವಾಗಿ ಲಭ್ಯವಿದ್ದರು. ಅದರ ಹೊರತಾಗಿ ಸುರ್ಜೇವಾಲ ಸಭೆ ನಡೆಸಿದ್ದೇಕೆ?, ಇದು ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಅನುಪಸ್ಥಿತಿಯನ್ನು ಪ್ರಸ್ತಾಪಿಸಿದಂತಾಯಿತಲ್ಲವೇ? ಎಂಬ ಟೀಕೆಗಳು ಕೇಳಿಬಂದಿವೆ.
ಶಾಸಕರ ಜೊತೆ ಚರ್ಚೆ ನಡೆಸಿದ್ದಕ್ಕಷ್ಟೇ ಸೀಮಿತವಾಗದೆ ಸುರ್ಜೇವಾಲ ಈಗ ಸಚಿವರ ಜೊತೆ ಪ್ರತ್ಯೇಕ ಸಮಾಲೋಚನೆಯಲ್ಲಿ ಮುಂದಾಗಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…