Mysore
19
scattered clouds

Social Media

ಸೋಮವಾರ, 26 ಜನವರಿ 2026
Light
Dark

ರಾಜ್ಯದಲ್ಲಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಆಡಳಿತ ಜಾರಿ ಆಗಿದೆಯಾ?: ಆರ್.‌ಅಶೋಕ್‌ ಪ್ರಶ್ನೆ

Randeep Singh Surjewala's rule been implemented in the state

ಬೆಂಗಳೂರು: ರಾಜ್ಯದಲ್ಲಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಆಡಳಿತ ಜಾರಿ ಆಗಿದೆಯಾ? ಸಂಪುಟ ಸಭೆಯೂ ಸುರ್ಜೇವಾಲಾ ಅಧ್ಯಕ್ಷತೆಯಲ್ಲಿ ನಡೆಯುತ್ತಾ? ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ಪ್ರಶ್ನೆ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯದಲ್ಲಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಆಡಳಿತ ಜಾರಿ ಆಗಿದೆಯಾ? ಗುರುವಾರದ ಸಂಪುಟ ಸಭೆಯೂ ಸುರ್ಜೇವಾಲಾ ಅವರ ಆಧ್ಯಕ್ಷತೆಯಲ್ಲಿ ನಡೆಯುತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ.

ಲಾಟರಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್‌ ಹೈಕಮಾಂಡ್‌ ಕರ್ನಾಟಕದಲ್ಲಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಆಡಳಿತ ಹೇರಿದೆ.

ಕೆಪಿಸಿಸಿ ಕಚೇರಿಯಲ್ಲಿ, ಪಂಚತಾರಾ ಹೋಟೆಲ್‌ಗಳಲ್ಲಿ ಅತೃಪ್ತ ಶಾಸಕರ ದೂರು-ದುಮ್ಮಾನ ಕೇಳುತ್ತಿರುವ, ಮಂತ್ರಿಗಳ ಸಾಧನೆ ಪರಾಮರ್ಶೆ ಮಾಡುತ್ತಿರುವ ಸುರ್ಜೇವಾಲಾ ಅವರು ಗುರುವಾದ ವಿಧಾನಸೌಧದಲ್ಲಿ ನಡೆಯುವ ಸಂಪುಟ ಸಭೆಗೂ ಬಂದು ತಾವೇ ಅಧ್ಯಕ್ಷತೆ ವಹಿಸಿದರೂ ಅಚ್ಚರಿ ಪಡಬೇಕಿಲ್ಲ.

ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ ಹಿಡಿತವಿಲ್ಲ. ಡಿಸಿಎಂ ಡಿಕೆಶಿ ಅವರಿಗೆ ಶಾಸಕರ ಬೆಂಬಲ ಇಲ್ಲ. ತಮಗೆ ಬೇಕಾದವರನ್ನು ಸಿಎಂ ಆಗಿ ನೇಮಕ ಮಾಡಲು ಅವರಿಗೆ ಶಕ್ತಿ ಇಲ್ಲ.

ಒಟ್ಟಿನಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಬಲ್ಲ ಒಬ್ಬ ನಾಯಕನೂ ಇಲ್ಲದೇ ಕಾಂಗ್ರೆಸ್‌ ಹೈಕಮಾಂಡ್‌ ತ್ರಿಶಂಕು ಸ್ಥಿತಿಯಲ್ಲಿದೆ ಎಂದು ವ್ಯಂಗ್ಯವಾಡಿದ್ದಾರೆ.

Tags:
error: Content is protected !!