Randeep Singh Surjewala's rule been implemented in the state
ಬೆಂಗಳೂರು: ರಾಜ್ಯದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಆಡಳಿತ ಜಾರಿ ಆಗಿದೆಯಾ? ಸಂಪುಟ ಸಭೆಯೂ ಸುರ್ಜೇವಾಲಾ ಅಧ್ಯಕ್ಷತೆಯಲ್ಲಿ ನಡೆಯುತ್ತಾ? ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಆಡಳಿತ ಜಾರಿ ಆಗಿದೆಯಾ? ಗುರುವಾರದ ಸಂಪುಟ ಸಭೆಯೂ ಸುರ್ಜೇವಾಲಾ ಅವರ ಆಧ್ಯಕ್ಷತೆಯಲ್ಲಿ ನಡೆಯುತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ.
ಲಾಟರಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಆಡಳಿತ ಹೇರಿದೆ.
ಕೆಪಿಸಿಸಿ ಕಚೇರಿಯಲ್ಲಿ, ಪಂಚತಾರಾ ಹೋಟೆಲ್‌ಗಳಲ್ಲಿ ಅತೃಪ್ತ ಶಾಸಕರ ದೂರು-ದುಮ್ಮಾನ ಕೇಳುತ್ತಿರುವ, ಮಂತ್ರಿಗಳ ಸಾಧನೆ ಪರಾಮರ್ಶೆ ಮಾಡುತ್ತಿರುವ ಸುರ್ಜೇವಾಲಾ ಅವರು ಗುರುವಾದ ವಿಧಾನಸೌಧದಲ್ಲಿ ನಡೆಯುವ ಸಂಪುಟ ಸಭೆಗೂ ಬಂದು ತಾವೇ ಅಧ್ಯಕ್ಷತೆ ವಹಿಸಿದರೂ ಅಚ್ಚರಿ ಪಡಬೇಕಿಲ್ಲ.
ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ ಹಿಡಿತವಿಲ್ಲ. ಡಿಸಿಎಂ ಡಿಕೆಶಿ ಅವರಿಗೆ ಶಾಸಕರ ಬೆಂಬಲ ಇಲ್ಲ. ತಮಗೆ ಬೇಕಾದವರನ್ನು ಸಿಎಂ ಆಗಿ ನೇಮಕ ಮಾಡಲು ಅವರಿಗೆ ಶಕ್ತಿ ಇಲ್ಲ.
ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಬಲ್ಲ ಒಬ್ಬ ನಾಯಕನೂ ಇಲ್ಲದೇ ಕಾಂಗ್ರೆಸ್ ಹೈಕಮಾಂಡ್ ತ್ರಿಶಂಕು ಸ್ಥಿತಿಯಲ್ಲಿದೆ ಎಂದು ವ್ಯಂಗ್ಯವಾಡಿದ್ದಾರೆ.
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…
ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.…