ಬೆಂಗಳೂರು : ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ಚಿತ್ರನಟಿ ರನ್ಯಾರಾವ್ ಅವರ ಕಂಪನಿಗೆ
ಕೆಐಎಡಿಬಿ ಜಮೀನು ನೋಂದಣಿ ಆಗಿಲ್ಲ ಎಂದು ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ ಸ್ಪಷ್ಟನೆ ನೀಡಿದರು.
ವಿಧಾನಸೌಧದ ಮೊಗಸಾಲೆಯಲ್ಲಿ ಟಿ.ವಿ ಮಾಧ್ಯಮದವರಿಗೆ ಟಿ ಬಿ ಜಯಚಂದ್ರ ಅವರು ಮಾತನಾಡಿದರು.
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರ ನಟಿ ರನ್ಯಾರಾವ್ ಅವರು ನಿರ್ದೇಶಕಿ ಆಗಿರುವ ಕ್ವಿರೋಡ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ತುಮಕೂರು ಜಿಲ್ಲೆಯ ಸಿರಾದಲ್ಲಿ ಕೆಐಎಡಿಬಿ ವತಿಯಿಂದ 2023ರಲ್ಲಿ 12 ಎಕರೆ ಜಮೀನನ್ನು ಮಂಜೂರು ಮಾಡಲಾಗಿತ್ತು. ಆದರೆ ರನ್ಯಾ ರಾವ್ ಅವರು ಕೆಐಎಡಿಬಿ ಜಮೀನಿನ ಖರೀದಿಗೆ ಹಣ ಪಾವತಿ ಮಾಡಿರಲಿಲ್ಲ. ಹೀಗಾಗಿ ಅವರ ಕಂಪನಿಗೆ ಕೆಐಎಡಿಬಿ ಜಮೀನನ್ನು ನೀಡಿಲ್ಲ ಎಂದು ಟಿಬಿ ಜಯಚಂದ್ರ ಅವರು ಸ್ಪಷ್ಟಪಡಿಸಿದ್ದಾರೆ .
2023 ಜನವರಿಯಲ್ಲಿ 12 ಎಕರೆ ಜಮೀನನ್ನು ರನ್ಯಾ ರಾವ್ ಅವರ ಕಂಪನಿಗೆ ಮಂಜೂರು ಮಾಡಲಾಗಿತ್ತು.
2023 ಮೇ ತಿಂಗಳಲ್ಲಿ ತಾವು ಶಾಸಕರಾದ ನಂತರ ಸ್ಥಳೀಯರಿಗೆ ಕೆಐಎಡಿಬಿ ಜಮೀನು ನೀಡಬೇಕೆಂದು ನಿರ್ಧಾರ ಕೈಗೊಂಡಿರುವುದರಿಂದ ಟಿ.ಬಿ ಜಯಚಂದ್ರ ಅವರು ಇದೇ ವೇಳೆ ತಿಳಿಸಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…