Mysore
23
clear sky

Social Media

ಶನಿವಾರ, 24 ಜನವರಿ 2026
Light
Dark

ರನ್ಯಾ ಕೇಸ್‌: ಕಂಪನಿಗೆ ಜಮೀನು ನೀಡಿಲ್ಲ ಎಂದ ಎಂಬಿ ಪಾಟೀಲ್‌

ಬೆಂಗಳೂರು: ರನ್ಯಾ ಒಡೆತನದ ಕಂಪನಿಗೆ  ಜಮೀನು  ಕೊಟ್ಟಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ, ಆದರೆ ಕಂಪನಿಯು ನಿಗದಿತ ಅವಧಿಯೊಳಗೆ ಹಣ ಪಾವತಿಸಿಲ್ಲದ ಕಾರಣ ಜಮೀನು ಹಂಚಿಕೆ ಮಾಡಿಲ್ಲ ಎಂದು ಸಚಿವ ಎಂಬಿ ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ

ಇಂದು ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರನ್ಯಾರಾವ್‌ ಅವರ ಟಿಎಂಟಿ ಸರಳು ಕಂಪನಿ ಸ್ಥಾಪನೆಗೆ 12 ಎಕರೆ ಜಮೀನು ಮಂಜೂರು ಮಾಡಿತ್ತು.

ಶಿವಮೊಗ್ಗದ ಶಿರಾದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಜಮೀನು ಮಂಜೂರು ಮಾಡಲು 2023ರ ಜನವರಿ 2ರಂದು ನಡೆದಿದ್ದ ಉನ್ನತ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ತೀರ್ಮಾನಿಸಿತ್ತು.

ಆದರೆ, ರನ್ಯಾ ಅವರು ನಿಗದಿತ ಸಮಯದಲ್ಲಿ ಹಣ ಪಾವತಿಸಿದ ಕಾರಣ ಅವರಿಗೆ ಜಮೀನಿನ ಹಂಚಿಕೆ ಮಾಡಿಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.

Tags:
error: Content is protected !!