ರಾಜ್ಯ

ಚಿನ್ನ ಕಳ್ಳಸಾಗಣೆ ಕೇಸ್‌ | ರನ್ಯಾಗೆ ರಾಜಕೀಯ ನಂಟು ; ನಟಿ ಕಂಪನಿಗೆ 12 ಎಕರೆ ಜಮೀನು ಮಂಜೂರು ?

ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್‍ಗೂ ಕರ್ನಾಟಕ ರಾಜಕೀಯ ವ್ಯಕ್ತಿಗಳಿಗೂ ದೊಡ್ಡ ನಂಟಿರುವುದು ತನಿಖೆಯಿಂದ ಗೊತ್ತಾಗಿದೆ.

ರನ್ಯಾ ರಾವ್ ನಿರ್ದೇಶಕಿಯಾಗಿರುವ ಕಂಪನಿಗೆ ಕರ್ನಾಟಕ ಸರ್ಕಾರದಿಂದಲೇ 12 ಎಕರೆ ಜಮೀನು ಮಂಜೂರಾಗಿದೆ. ರನ್ಯಾ ಮತ್ತು ರಷಬ್ ಇಬ್ಬರು ಕೂಡ ಕಂಪನಿಯ ನಿರ್ದೇಶಕರು. ರನ್ಯಾ ಅವರ ಸೇರಿದೆ ಎನ್ನಲಾದ ಕ್ರಿಸೋರಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯ ನಿರ್ದೇಶಕಿಯಾಗಿದ್ದಾರೆ.

ಈ ಕಂಪನಿಗೆ 2023 ರಲ್ಲಿ ಕೆಐಎಡಿಬಿಯಿಂದ ಬರೋಬ್ಬರಿ 12 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಸರ್ಕಾರ ಜಮೀನು ಮಂಜೂರು ಮಾಡಿರುವ ದಾಖಲೆಯಿದೆ. ಒಬ್ಬ ನಟಿ, ನಿರ್ದೇಶಕಿಯಾಗಿರುವ ಕಂಪನಿಗೆ 12 ಎಕರೆ ಜಮೀನು ಮಂಜೂರಾಗಿದ್ದು ಹೇಗೆ ಎಂಬ ಹತ್ತು ಹಲವು ಪ್ರಶ್ನೆಗಳು ಹುಟ್ಟಿಕೊಂಡಿವೆ. ರನ್ಯಾ ರಾವ್ ಕಂಪನಿಗೆ ಫಟಾಫಟ್ ಭೂಮಿ ಮಂಜೂರಾಗಿದೆಯೇ ಎಂಬ ಗುಮಾನಿಯು ಮೂಡಿದೆ. ರಾಜಕಾರಣಿಯೊಬ್ಬರ ಕೃಪಾಕಟಾಕ್ಷದಿಂದ ಬರೋಬ್ಬರಿ 12 ಎಕರೆ ಕೆಐಎಡಿಬಿ ಲ್ಯಾಂಡ್ ಮಂಜೂರಾಗಿದೆ. ತುಮಕೂರಿನ ಶಿರಾದಲ್ಲಿ ಸ್ಟೀಲ್ ಕಂಪನಿಗೆ ಜಮೀನು ಮಂಜೂರಾಗಿದೆ.

ಕಂಪನಿ ಸ್ಥಾಪನೆಯಾದ 9 ತಿಂಗಳಲ್ಲೇ ಸರ್ಕಾರ ಭೂಮಿ ಕೊಟ್ಟಿದೆ. 2022ರ ಏಪ್ರಿಲ್‍ನಲ್ಲಿ ಕಂಪನಿ ಸ್ಥಾಪನೆಯಾಯಿತು. 2023 ಜನವರಿಯಲ್ಲಿ ಭೂಮಿ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ರನ್ಯಾ ರಾವ್‍ಗಾಗಿ ಫೈಲ್ ಸ್ಪೀಡ್ ಅಪ್ ಆಗಿದ್ಯಾ? ರನ್ಯಾ ಹಿಂದಿರುವ ಆ ರಾಜಕಾರಣಿ ಯಾರು ಎಂಬ ಪ್ರಶ್ನೆ ಮೂಡಿದೆ.

ಏನಿದು ಪ್ರಕರಣ?
ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮಾ.3ರ ಸೋಮವಾರ ರಾತ್ರಿ 7 ಗಂಟೆ ಸುಮಾರಿಗೆ ಬಂದಿಳಿದ ನಟಿ ರನ್ಯಾ ರಾವ್‌ ಅವರನ್ನು ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಬಳಿಕ ತಪಾಸಣೆ ಮಾಡಿದಾಗ 12 ಕೋಟಿ ರೂ ಮೌಲ್ಯದ 14.8ಕೆ.ಜಿ ತೂಕದ ಚಿನ್ನದ ಬಿಸ್ಕತ್ತುಗಳು ಪತ್ತೆಯಾಗಿದ್ದವು. ಒಟ್ಟಾರೆ ನಟಿ ರನ್ಯಾ ಅವರಿಂದ 17.16 ಕೋಟಿ ಮೌಲ್ಯದ ವಸ್ತುಗಳು ಪತ್ತೆಯಾಗಿ, ಅವುಗಳನ್ನು ವಶಕ್ಕೆ ಪಡೆದ ಡಿಆರ್‌ಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದರು. ಅಲ್ಲದೇ, ಇದೀಗ ಈ ಪ್ರಕರಣದಲ್ಲಿ ಸಿಬಿಐ ಸಹ ಎಂಟ್ರಿಯಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

4 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

4 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

4 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

4 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

4 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

6 hours ago