ಬೆಂಗಳೂರು: ನಟಿ ರನ್ಯಾರಾವ್ ಅವರನ್ನು ಗೋಲ್ಟ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ಈ ತನಿಖೆಯಲ್ಲಿ ದುಬೈನಿಂದ ಅಕ್ರಮವಾಗಿ ತಂದ ಚಿನ್ನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸರ್ಕಾರ ವಾಹನದಲ್ಲೇ ಸಾಗಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್‌ಐ ಅಧಿಕಾರಿಗಳ ತನಿಖೆ ವೇಳೆ ರನ್ಯಾರಾವ್ ಅವರು ಗೋಲ್ಡ್ ಅನ್ನು ಅಕ್ರಮವಾಗಿ ವಿಮಾನ ನಿಲ್ದಾಣದಿಂದ ಹೇಗೆ ಸಾಗಿಸುತ್ತಿದ್ದಳು ಎಂಬುವುದು ಪತ್ತೆಹಚ್ಚಿದ್ದಾರೆ. ಅಂದ ಹಾಗೇ ದುಬೈನಿಂದ ಅಕ್ರಮವಾಗಿ ತಂದ ಚಿನ್ನವನ್ನು ನಟಿ ರನ್ಯಾ ರಾವ್ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸರ್ಕಾರಿ ವಾಹನದಲ್ಲಿ ಸಾಗಿಸುತ್ತಿದ್ದರು ಎಂಬುದು ಡಿಆರ್‌ಐ ತನಿಖೆ ವೇಳೆ ಬಹಿರಂಗವಾಗಿದೆ ಎನ್ನಲಾಗುತ್ತಿದೆ.
ಇನ್ನು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಗಳಿಗೆ ಎರಡು ಹೆಚ್ಚುವರಿ ಕಾರುಗಳನ್ನು ನೀಡಲಾಗುತ್ತದೆ. ಈ ಕಾರಿನಲ್ಲಿ ಪೊಲೀಸ್ ಅಧಿಕಾರಿಯ ಕುಟುಂಬ ವರ್ಗದವರು ಮಾತ್ರ ಬಳಸುವಂತೆ ಸೂಚನೆ ನೀಡಲಾಗಿರುತ್ತದೆ. ಅಂತೆಯೇ ಡಿಜಿಪಿ ರಾಮಚಂದ್ ರಾವ್ ಅವರಿಗೂ ಸಹ ಸರ್ಕಾರದಿಂದ ಹೆಚ್ಚುವರಿ ಕಾರು ನೀಡಲಾಗಿತ್ತು. ಹೀಗಾಗಿ ಈ ವಾಹನದಲ್ಲಿಯೇ ರನ್ಯಾ ಬೆಂಗಳೂರು ವಿಮಾನ ನಿಲ್ದಾಣದಿಂದ ಚಿನ್ನವನ್ನು ಸಾಗಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಿಬ್ಬಂದಿಗೆ ನೋಟಿಸ್ ಜಾರಿ
ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ವಿಚಾರವಾಗಿ ಸಿಬಿಐ ಅಧಿಕಾರಿ ಗೌರವ್ ಗುಪ್ತಾ ನೇತೃತ್ವದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರೋಟೋಕಾಲ್ ಸಿಬ್ಬಂದಿಗಳಾದ ಮಹಾಂತೇಶ್, ಬಸವರಾಜು ಹಾಗೂ ವೆಂಕಟರಾಜು ಎಂಬುವವರಿಗೆ ನೋಟಿಸ್ ಜಾರಿ ಮಾಡಿ ಶನಿವಾರ ವಿಚಾರಣೆ ಹಾಜರಾಗುಂತೆ ಸೂಚಿಸಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.





