Mysore
34
scattered clouds

Social Media

ಶನಿವಾರ, 28 ಮಾರ್ಚ್ 2026
Light
Dark

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್: ಆಗಸ್ಟ್.‌1ಕ್ಕೆ ತೀರ್ಪು ಮುಂದೂಡಿಕೆ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್‌ಗೆ ಸಂಬಂಧಿಸಿದಂತೆ ಆಗಸ್ಟ್.‌1ಕ್ಕೆ ತೀರ್ಪು ಮುಂದೂಡಿಕೆಯಾಗಿದೆ.

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಕೆ.ಆರ್‌.ನಗರ ಮೂಲದ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಲಿಲ್ಲ.

ಪ್ರಜ್ವಲ್‌ ರೇವಣ್ಣರನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಎರಡೂ ಕಡೆ ವಕೀಲರಿಂದ ಸ್ಪಷ್ಟನೆ ಕೇಳಿದ ಕೋರ್ಟ್‌ ಆಗಸ್ಟ್.‌1ಕ್ಕೆ ತೀರ್ಪು ಮುಂದೂಡಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್.‌1ಕ್ಕೆ ಪ್ರಜ್ವಲ್‌ ರೇವಣ್ಣ ಭವಿಷ್ಯ ನಿರ್ಧಾರವಾಗಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ.18ರಂದು ವಾದ ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರು ವಕೀಲರಿಂದ ಸ್ಪಷ್ಟನೆ ಕೇಳಿ ತೀರ್ಪು ಮುಂದೂಡಿಕೆ ಮಾಡಿದ್ದಾರೆ.

Tags:
error: Content is protected !!