ಬೆಂಗಳೂರು: ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸುವ ಮೂಲಕ ಮತ್ತೊಂದು ಶಾಕ್ ನೀಡಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಕೈಬಿಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇನ್ನು ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 9ಕ್ಕೆ ಮುಂದೂಡಿದೆ.
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ದ 4 ಪ್ರಕರಣ ದಾಖಲಾಗಿದ್ದು, ಈ ಎಲ್ಲಾ ಪ್ರಕರಣದ ಜಾಮೀನು ಅರ್ಜಿಗಳು ಸಹ ವಜಾಗೊಂಡಿವೆ. ಸದ್ಯ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.





