ಬೆಂಗಳೂರು: ಆತ್ಯಾಚಾರ ಆರೋಪ ಪ್ರಕರಣಕಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಹೊರತುಪಡಿಸಿ ಇನ್ನುಳಿದ ಮೂವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣಕ್ಕೆ ಸಂಬಂಧಿದಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ನ್ಯಾಯಪೀಠವು, ಆರೋಪಿಗಳಾದ ಲೋಹಿತ್, ಮಂಜುನಾಥ್ ಹಾಗೂ ಕಿರಣ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ ಸಕ್ರಿಯವಾಗಿದ್ದ ರಾಜರಾಜೇಶ್ವರಿ ನಗರದ ಸು.40 ವರ್ಷದ ಮಹಿಳೆಯ ದೂರಿನ ಆಧಾರದ ಮೇಲೆ ಕಗ್ಗಲೀಪು ಠಾಣೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.