ರಾಜ್ಯ

ಆತ್ಯಾಚಾರ ಆರೋಪ ಪ್ರಕರಣ: ಶಾಸಕ ಮುನಿರತ್ನ ಹೊರತುಪಡಿಸಿ ಮೂವರಿಗೆ ಜಾಮೀನು

ಬೆಂಗಳೂರು: ಆತ್ಯಾಚಾರ ಆರೋಪ ಪ್ರಕರಣಕಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಹೊರತುಪಡಿಸಿ ಇನ್ನುಳಿದ ಮೂವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಈ ಪ್ರಕರಣಕ್ಕೆ ಸಂಬಂಧಿದಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್‌ ಗಜಾನನ ಭಟ್‌ ನ್ಯಾಯಪೀಠವು, ಆರೋಪಿಗಳಾದ ಲೋಹಿತ್‌, ಮಂಜುನಾಥ್‌ ಹಾಗೂ ಕಿರಣ್‌ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ ಸಕ್ರಿಯವಾಗಿದ್ದ ರಾಜರಾಜೇಶ್ವರಿ ನಗರದ ಸು.40 ವರ್ಷದ ಮಹಿಳೆಯ ದೂರಿನ ಆಧಾರದ ಮೇಲೆ ಕಗ್ಗಲೀಪು ಠಾಣೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

24 mins ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

34 mins ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

42 mins ago

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…

57 mins ago

ಫಲಿತಾಂಶ ಯಶಸ್ವಿಗೊಳಿಸಲು ಶಾಲೆಯಲ್ಲೇ ವಾಸ್ತವ್ಯ ಹೂಡಿದ ಬಿಇಓ

ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…

1 hour ago

ದೊಡ್ಡಕವಲಂದೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಗಳು: ಸಾಂಕ್ರಾಮಿಕ ರೋಗದ ಭೀತಿ

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…

2 hours ago