ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.
ಈ ಸಂಬಂಧ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಸೇರಿದಂತೆ ಏಳು ಮಂದಿ ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಕಗ್ಗಲೀಪುರ ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇನ್ನು ಜೈಲು ಪಾಲಾಗಿರುವ ಶಾಸಕ ಮುನಿರತ್ನ ಅವರ ಜಾಮೀನು ಅರ್ಜಿ ಆದೇಶವನ್ನು ಇಂದಿಗೆ ನ್ಯಾಯಾಲಯ ಕಾಯ್ದಿರಿಸಿದೆ.
ಜಾತಿ ನಿಂದನೆ ಆರೋಪ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಮತ್ತೆ ಜೈಲಾಗುತ್ತಾ ಅಥವಾ ಜಾಮೀನು ಸಿಗುತ್ತಾ ಎಂಬುದೇ ಇಂದೇ ನಿರ್ಧಾರವಾಗಲಿದೆ.