ಬೆಂಗಳೂರು: ಅತ್ಯಾಚಾರ ಪ್ರಕರಣ ಆರೋಪದ ಹಿನ್ನೆಲೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದೆ.
ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂತ್ರಸ್ಥೆಯೂ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್.9 ರಂದು ದೂರು ನೀಡಿದ್ದರು. ಇದರ ಬೆನ್ನಲ್ಲೇ ಶಾಸಕ ವಿನಯ್ ಅವರು, 2 ಕೋಟಿ ರೂಪಾಯಿ ಬೇಡಿಕೆಯನ್ನಿಟ್ಟಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಮಹಿಳೆಯ ವಿರುದ್ಧವೇ ಪ್ರತಿದೂರು ಕೊಟ್ಟಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಸ್ಥಳ ಮಹಜರು ನಡೆಸಿದ್ದಾರೆ. ಅಲ್ಲದೇ , ಸಂತ್ರಸ್ತೆಯಿಂದ ಪ್ರಾಥಮಿಕ ಹೇಳಿಕೆ ಪಡೆದಿದ್ದಾರೆ. ಆದರೆ, ಇದೀಗ ಈ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.