ಬೆಂಗಳೂರು: ರಾಜ್ಯದಲ್ಲಿ ಲವ್ ಜಿಹಾದ್ ಲಿಂಕ್ ಇರುವ ಅತ್ಯಾಚಾರ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಈ ಹಿಂದೆ ಹುಬ್ಬಳ್ಳಿ, ಹಾವೇರಿಯಲ್ಲಿ ನಡೆದ ಪ್ರಕರಣಗಳನ್ನು ಮುಚ್ಚಿ ಹಾಕಲಾಗಿದೆ. ಇದು ಪೂರ್ವ ನಿಯೋಜಿತವಾಗಿ ನಡೆಯುತ್ತಿದ್ದು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಇದು ಹೆಚ್ಚಿದ್ದು, ಸರ್ಕಾರದ ಕುಮ್ಮಕ್ಕಿನಿಂದಲೇ ಇದು ನಡೆಯುತ್ತಿದೆ. ಕಾಂಗ್ರೆಸ್ ತಮ್ಮನ್ನು ಏನೂ ಮಾಡುವುದಿಲ್ಲ ಎಂಬ ನಂಬಿಕೆ ಇಂದವರು ಇದನ್ನ ಮಾಡುತ್ತಿದ್ದಾರೆ. ಕೇರಳದಲ್ಲಿ ಲವ್ ಜಿಹಾದ್ ಕೇಂದ್ರವೂ ಇದ್ದು, ಅಲ್ಲಿ ಯುವಕರಿಗೆ ತರಬೇತಿ ನೀಡಲಾಗುತ್ತಿದೆ. 2047 ರೊಳಗೆ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುತ್ತೇವೆ ಎಂಬ ಕರಪತ್ರಗಳು ಕೂಡ ಹರಿದಾಡಿವೆ ಎಂದರು.
ಕೊಲೆ ಆರೋಪಿ ನಟ ದರ್ಶನ್ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ಫೋಟೋ ತೆಗೆಯಲು ಮೊಬೈಲ್ ಎಲ್ಲಿಂದ ಬಂತು? ಜೈಲಿನಲ್ಲಿ ರಾಜಾರೋಷವಾಗಿ ಸಿಗರೇಟು, ಕಾಫಿ, ಮಾದಕ ವಸ್ತು ನೀಡಲಾಗುತ್ತಿದೆ. ಈಗಾಗಲೇ ಕಾನೂನು ಸುವ್ಯವಸ್ಥೆ ಕುಸಿದುಹೋಗಿದೆ. ಅತ್ಯಾಚಾರ, ಕೊಲೆ ಹೆಚ್ಚಿದೆ. ಸರ್ಕಾರ ಉಳಿಯುತ್ತೋ, ಇರುತ್ತೋ ಎಂದೇ ಶಾಸಕರು, ಸಚಿವರು ಚಿಂತೆ ಮಾಡುತ್ತಿದ್ದಾರೆ. ಜೈಲಿನಲ್ಲಾದ ಈ ಘಟನೆಗೆ ಸರ್ಕಾರ ಸರಿಯಾದ ಉತ್ತರ ನೀಡಬೇಕು. ತನಿಖೆ ಮಾಡುತ್ತೇವೆ ಎಂದರೆ ಏನೂ ಉಪಯೋಗವಿಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆ ಸಂಬಂಧ ಬಿಜೆಪಿ-ಜೆಡಿಎಸ್‌ನಿಂದ ಕಾನೂನು ಹೋರಾಟ ಮಾಡಲು ಚರ್ಚೆ ನಡೆಯುತ್ತಿದೆ. ಇದರ ಜೊತೆಗೆ ಭ್ರಷ್ಟಾಚಾರದ ವಿರುದ್ಧದ ಹೋರಾಟವೂ ಮುಂದುವರಿಯಲಿದೆ ಎಂದು ತಿಳಿಸಿದರು.
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…
ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…
ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ…
ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…