ರಾಜ್ಯ

ಹೋಮ್‌ ಸ್ಟೇ ಮಾಲಕಿ ಮೇಲೆ ಅತ್ಯಾಚಾರ: ಪೊಲೀಸ್‌ ಸಬ್‌ ಡಿವಿಷನ್‌ ಸ್ಥಾಪನೆಗೆ ಜನಾರ್ಧನ ರೆಡ್ಡಿ ಒತ್ತಾಯ

ವಿಜಯನಗರ: ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಹಂಪಿ ಬಳಿ ಇರುವ ಹೋಮ್‌ಸ್ಟೇನ ಮಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಸ್ಥಳದಲ್ಲಿ ಪೊಲೀಸ್‌ ಸಬ್‌ ಡಿವಿಷನ್‌ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಭಾರತದಲ್ಲಿ ಅತಿ ಹೆಚ್ಚು ವಿದೇಶಿ ಪ್ರವಾಸಿಗಳು ಬರುವ ಪ್ರವಾಸಿ ಸ್ಥಳ ಹಂಪಿಯಾಗಿದೆ. ಈ ಸ್ಥಳದ ತುಸು ದೂರದಲ್ಲಿರುವ ಹೋಮ್ ಸ್ಟೇ ಮಾಲಕಿಯ ಮೇಲೆ ಅತ್ಯಾಚಾರ ನಡೆದ ಘಟನೆ ವರದಿಯಾಗಿದೆ. ಇದಕ್ಕೆ ರಾಜ್ಯ ಸರ್ಕಾರದ ವಿಫಲತೆಯೇ ಕಾರಣ. ಇಲ್ಲಿ ಮಾಡಲಾಗಿದ್ದ ಪೊಲೀಸ್ ಭದ್ರತಾ ವ್ಯವಸ್ಥೆಯನ್ನು ಹಿಂಪಡೆದಿದ್ದರಿಂದ ಈ ಅವಘಡ ಸಂಭವಿಸಿದ್ದು, ಹಂಪಿಯಲ್ಲಿ ಕೂಡಲೇ ಪೊಲೀಸ್ ಸಬ್ ಡಿವಿಷನ್ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.

ಗಂಗಾವತಿ ತಾಲ್ಲೂಕಿನ ಸಣಾಪುರದಲ್ಲಿ ಇಸ್ರೇಲಿ ಪ್ರವಾಸಿಗರೊಬ್ಬರು ಹೋಮ್‌ ಸ್ಟೇ ಮಾಲಕಿಯ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಪ್ರಕರಣ ಅತ್ಯಂತ ಹೀನ ಕೃತ್ಯವಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಘಟನೆ ಕುರಿತು ವರದಿ ಪಡೆದು ತಕ್ಷಣವೇ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಅದರಂತೆ ಪೊಲೀಸ್ ಅಧಿಕಾರಿಗಳು ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರ ಸರ್ಕಾರದಲ್ಲಿ ನಾನು ಅಖಂಡ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಅವರ ಸಹಕಾರದೊಂದಿಗೆ ಹಂಪಿಯಲ್ಲಿ ಪೊಲೀಸ್ ಸಬ್ ಡಿವಿಷನ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಡಿವೈಎಸ್ಪಿ ಮಟ್ಟದ ಅಧಿಕಾರಿಯನ್ನು ನೇಮಿಸಿ 32 ಪೊಲೀಸ್ ತಂಡಗಳನ್ನು ರಚಿಸಿ ಅವರಿಗೆ ದ್ವಿಚಕ್ರ ವಾಹನವನ್ನು ನೀಡಲಾಗಿತ್ತು. ಈ ಮೂಲಕ ಹಂಪಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಆನೆಗೊಂದಿ ಸಹ ಒಳಗೊಂಡಿರುವ ಕಾರಣ ಎರಡು ಐತಿಹಾಸಿಕ ಸ್ಥಳಗಳಿಗೆ ಆಗಮಿಸುವ ದೇಶ ವಿದೇಶದ ಪ್ರವಾಸಿಗರ ರಕ್ಷಣೆಗೆ ಹಗಲಿರುಳು ಗಸ್ತು ತಿರುಗುವ ಉತ್ತಮ ಪೊಲೀಸ್ ವ್ಯವಸ್ಥೆ ಕಲ್ಪಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಇದೀಗ ದುರಾದೃಷ್ಟಕರ ಸಂಗತಿ ಎಂದರೆ ನಂತರ ಬಂದ ಸರ್ಕಾರ ಆ ಪೊಲೀಸ್ ಸಬ್ ಡಿವಿಷನ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಅದನ್ನು ಬೇರೆಡೆಗೆ ಸ್ಥಳಾಂತರಗೊಳಿಸಲಾಗಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಅತ್ಯಂತ ವಿನಮ್ರವಾಗಿ ವಿನಂತಿಸುತ್ತಾ, ಹಂಪಿ ಹಾಗೂ ಆನೆಗೊಂದಿಗೆ ಆಗಮಿಸುವ ದೇಶ-ವಿದೇಶಗಳ ಪ್ರವಾಸಿಗರ ರಕ್ಷಣೆಗಾಗಿ ಈ ಹಿಂದೆ ಕಲ್ಪಿಸಲಾಗಿದ್ದ ಪೊಲೀಸ್ ಸಬ್ ಡಿವಿಷನ್ ಹಂಪಿಯಲ್ಲಿ ಪುನಃ ಸ್ಥಾಪಿಸಬೇಕು. ಜೊತೆಗೆ, ಆನೆಗೊಂದಿಯಲ್ಲಿ ಪ್ರತ್ಯೇಕ ಪೊಲೀಸ್ ಠಾಣೆ ನಿರ್ಮಿಸಿ ಉತ್ತಮ ಭದ್ರತಾ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ಭಾರತದಲ್ಲಿಯೇ ಅತಿ ಹೆಚ್ಚು ದೇಶ-ವಿದೇಶಗಳ ಪ್ರವಾಸಿಗರು ಆಗಮಿಸುವ ಪ್ರಸಿದ್ಧ ಪುಣ್ಯಕ್ಷೇತ್ರ ಹಾಗೂ ಪ್ರವಾಸಿ ತಾಣಗಳಾಗಿರುವ ಹಂಪಿ ಮತ್ತು ಆನೆಗೊಂದಿ ಭಾಗದ ಪ್ರತಿಯೊಬ್ಬರ ಸುರಕ್ಷತೆ ಕಾಪಾಡುವಲ್ಲಿ ಸರ್ಕಾರ ಬದ್ಧತೆ ತೋರಲಿ ಎಂಬುವುದು ನನ್ನ ಆಶಯವಾಗಿದೆ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

58 mins ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

1 hour ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

2 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

3 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

3 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

11 hours ago