ಬೆಂಗಳೂರು: ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಿದ್ದೆವು. ಆದರೆ ರಶ್ಮಿಕಾ ಮಂದಣ್ಣ ನನಗೆ ಸಮಯವಿಲ್ಲ, ಬರಲ್ಲವೆಂದು ಹೇಳಿದ್ದರು ಎಂದು ಶಾಸಕ ಗಣಿಗ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು. ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದವರು. ಅವರನ್ನು ಕಳೆದ ಚಲನಚಿತ್ರೋತ್ಸವಕ್ಕೆ ಆಹ್ವಾನ ನೀಡಿದ್ದೇವು. ಆದರೆ ಅವರು ನಾನು ಹೈದರಾಬಾದ್‌ನಲ್ಲಿ ಇರೋದು, ಬರಲು ನನಗೆ ಸಮಯವಿಲ್ಲ ಎಂದು ಹೇಳಿದ್ದರು. ಅವರಿಗೆ ಬುದ್ದಿ ಕಲಿಸಬೇಕು ಅಲ್ವಾ ಎಂದು ವಾಗ್ದಾಳಿ ನಡೆಸಿದರು.
ನಾನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆಯುತ್ತೇನೆ. ಆದರೆ ಸಿನಿಮಾ ಸಬ್ಸಿಡಿಗಳನ್ನು ನಿಲ್ಲಿಸುವ ಬಗ್ಗೆ ಯೋಚಿಸಬೇಕು. ಆಂಧ್ರದ ನರಸಿಂಹಲು ನಮ್ಮ ರಾಜ್ಯದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಹೇಳಿಕೆಗಳನ್ನು ನೀಡುತ್ತಾರೆ. ಆಂಧ್ರಪ್ರದೇಶದಿಂದ ನಮ್ಮ ರಾಜ್ಯಕ್ಕೆ ಬಂದು ದುಡ್ಡು ದೋಚಿಕೊಂಡು ಹೋಗಿ, ನಮ್ಮ ಬಗ್ಗೆ ಮಾತನಾಡುತ್ತಾನೆ. ಮೊನ್ನೆ ಸಿಸಿಎಲ್ ಮ್ಯಾಚ್ ನಡೆಯಿತು, ಆಗ ನಾವು ಅದನ್ನು ನಿಲ್ಲಿಸಬೇಕಿತ್ತು. ಇದು ಲಾಸ್ಟ್ ವಾರ್ನಿಂಗ್, ಚಲನಚತ್ರ ಮಂಡಳಿಯವರು ಬಾಯಿ ಮುಚ ಇರಬೇಕು ಎಂದು ಎಚ್ಚರಿಕೆ ನೀಡಿದರು.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…