ರಾಜ್ಯ

ಪಡಿತರ ವಿತರಣೆ | ಸಮಯ ಬದಲಾವಣೆ

ನ್ಯಾಯಬೆಲೆ ಅಂಗಡಿಗಳ ಗ್ರಾಹಕರ ಮನವಿಗೆ ಸರ್ಕಾರದ ಸ್ಪಂದನೆ
ಅ.1ರಿಂದ ಬೆಳಿಗ್ಗೆ 7ರಿಂದ ಮಧ್ಯಾಹ್ನ 12; ಸಂಜೆ 4ರಿಂದ ರಾತ್ರಿ 8 ಗಂಟೆವರೆಗೆ ಕಾರ್ಯ

ಬೆಂಗಳೂರು : ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಹಾಗೂ ಪಡಿತರ ಚೀಟಿದಾರರಿಗೆ ಅನುಕೂಲವಾಗುವಂತೆ ಅಂಗಡಿಗಳ ಕಾರ್ಯನಿರ್ವಹಣೆಯ ಸಮಯವನ್ನು ಬದಲಾವಣೆ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹಾಗೂ ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನ್ಯಾಯಬೆಲೆ ಅಂಗಡಿಗಳ ಕಾರ್ಯನಿರ್ವಹಣೆಯ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅಕ್ಟೋಬರ್ 1ರಿಂದ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಸಂಜೆ 4ರಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.

ಬೆಳಿಗ್ಗೆಯಿಂದ ಸಂಜೆಯವರೆಗೂ ಬೆವರು ಸುರಿಸಿ ದುಡಿಯುವ ದಿನಗೂಲಿ ಕಾರ್ಮಿಕರು, ಆಟೋ ಚಾಲಕರು, ಕಟ್ಟಡ ಕಾರ್ಮಿಕರು, ಪಡಿತರ ಪಡೆಯಲು ತಮ್ಮ ದಿನದ ದುಡಿಮೆಯನ್ನು ಕಳೆದುಕೊಂಡು ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಅದನ್ನು ತಪ್ಪಿಸಲು ಕೆಲಸಕ್ಕೆ ತೆರಳುವ ಮುನ್ನ ಅಥವಾ ಸಂಜೆ ಕೆಲಸ ಮುಗಿಸಿ ಮನೆಗೆ ಹಿಂದಿರುಗವಾಗ ತಮಗೆ ಅನುಕೂಲವಾದ ಸಮಯದಲ್ಲಿ ಪಡಿತರ ಪಡೆದುಕೊಳ್ಳಲು ಸಮಯ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಮಯದಂತೆ ನ್ಯಾಯಬೆಲೆ ಅಂಗಡಿಗಳು ಕಡ್ಡಾಯವಾಗಿ ಕಾರ್ಯನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

2 mins ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

29 mins ago

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

11 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

11 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

13 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

18 hours ago