ರಾಜ್ಯ

ರವಿ ಅಸ್ಲೀಲ ಪದ ಪ್ರಯೋಗ | ದಾಖಲೆ ಬಿಡುಗಡೆ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌

ಬೆಳಗಾವಿ : ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಎರಡು ದಿನ ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. ಕಳೆದ 26 ವರ್ಷಗಳಿಂದ ಸಂಘರ್ಷದಿಂದ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ ಎಂದರು. ‌

ಘಟನೆ ಬಳಿಕ ಸಿ.ಟಿ.ರವಿ ಹಾರ ತುರಾಯಿ ಹಾಕಿಸಿಕೊಂಡು ವೈಭವಿಕರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಅಪರಾಧಿ ಭಾವನೆ ಕಾಡುತ್ತಿದೆ. ನಾನು ಮತ್ತೆ ಸಭಾಪತಿ ಅವರಿಗೆ ದೂರು ಕೊಡುತ್ತೇನೆ.‌ ಸಿ.ಟಿ. ರವಿ ವಿರುದ್ಧ ಹೋರಾಟ ಮುಂದುವರಿಸುವೆ. ಪೊಲೀಸ್ ತನಿಖೆ ಬೇಗ ಆಗಬೇಕು. ಎಫ್ ಎಸ್ ಎಲ್ ವರದಿ ಬೇಗ ಬಹಿರಂಗವಾಗಬೇಕು. ಇಂಥ ಸಂದರ್ಭದಲ್ಲೂ ಬಿಜೆಪಿಯವರು ಸಿ.ಟಿ ರವಿ ಬೆನ್ನಿಗೆ ನಿಂತಿದ್ದಾರೆ ಎಂದು ಸಚಿವರು ಕಿಡಿ ಕಾರಿದರು.

ಸಿ.ಟಿ.ರವಿ ಅವರಿಗೆ ಏನಾಗಿದೆ ಗಾಯ, ಎಷ್ಟಾಗಿದೆ ಗಾಯ. ಪೊಲೀಸರು ಎನ್ ಕೌಂಟರ್ ಮಾಡುತ್ತಿದ್ದರು, ಅಂತಾರಲ್ಲಾ, ನಾಚಿಕೆ ಆಗಲ್ವ ನಿಮಗೆ. ಇಡೀ ಕರ್ನಾಟಕದ ಜನತೆ ನಿಮಗೆ ಛೀಮಾರಿ ಹಾಕುತ್ತಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಏನು ಮಾಡಬೇಕು ಅದನ್ನು ಮಾಡಿದ್ದಾರೆ. ಪ್ರಕರಣದ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಸಿ.ಟಿ.ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೂ ಪತ್ರ ಬರೆಯುತ್ತೇನೆ, ಸಾಧ್ಯವಾದರೆ ಭೇಟಿ ಯಾಗುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸಿ.ಟಿ ರವಿ ಆಡಿದ ಮಾತಿರುವ ವಿಡಿಯೋ ರಿಲೀಸ್ ಮಾಡಿದ ಸಚಿವರು
ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಬಳಸಿದ ಅಶ್ಲೀಲ ಪದ ಬಳಕೆಯ ವಿಡಿಯೋವನ್ನು ಸಚಿವರು ಮಾಧ್ಯಮಗಳ ಎದುರು ಬಿಡುಗಡೆ ಮಾಡಿದರು. ಎರಡು ಪ್ರತ್ಯೇಕ ‌ವಿಡಿಯೋಗಳನ್ನು ಸಚಿವರು ರಿಲೀಸ್ ಮಾಡಿದರು. ಒಂದು ವಿಡಿಯೋದಲ್ಲಿ ಸಿ.ಟಿ. ರವಿ ಸಚಿವರಿಗೆ ಆಕ್ಷೇಪಾರ್ಹ ಪದ ಬಳಸಿದ್ದರೆ, ಮತ್ತೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿಗೆ ಡ್ರಗ್ ಅಡಿಟ್ ಅಂದಿದ್ದ ವಿಡಿಯೋವನ್ನು ಸಚಿವರು ಬಿಡುಗಡೆ ಮಾಡಿದರು. ‌

ಸಿಎಂ, ಡಿಸಿಎಂ ಸೇರಿದಂತೆ ಪಕ್ಷದ ನಾಯಕರಿಂದ ಧೈರ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಹಲವು ನಾಯಕರು ನನಗೆ ಧೈರ್ಯ ತುಂಬಿದರು ಎಂದರು.

ಸಿ.ಟಿ.ರವಿ ಬೆಳಗಾವಿ ಚಲೋ ಮಾಡುವ ಬಗ್ಗೆ ಕೇಳಿದಾಗ, ‌ಬೆಳಗಾವಿ ಶಾಂತಿಯ ತೋಟ. ನಾಲಿಗೆಯನ್ನು ಸ್ವಚ್ಛವಾಗಿಟ್ಟುಕೊಂಡು ಇಲ್ಲಿಗೆ ಯಾರು ಬೇಕಾದರೂ ಬರಬಹುದು. ಅಂತಹ ವ್ಯಕ್ತಿಗಳಿಗೆ ತುಂಬು ಹೃದಯದ ಸ್ವಾಗತ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರು ಚಾಲಕನ ಕಣ್ಣಿಗೆ ಕಾರದಪುಡಿ ಎರಚಿ ನಗದು ದರೋಡೆ

ಮಂಡ್ಯ: ಚಲಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದು ಚಾಲಕನ ಕಣ್ಣಿಗೆ ಕಾರದ ಪುಡಿ ಎರಚಿ ನಗದು ದರೋಡೆ ಮಾಡಿರುವ ಘಟನೆ ಮಂಡ್ಯ…

7 hours ago

ಥಿಯೇಟರ್‌ನಲ್ಲಿ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್‌ಗೆ ನೋಟಿಸ್‌

ಹೈದರಾಬಾದ್:‌ ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್‌ಗೆ ನೋಟಿಸ್‌ ನೀಡಲಾಗಿದೆ. ನಾಳೆ ಬೆಳಿಗ್ಗೆ 11…

8 hours ago

ಮಾಜಿ ಸಿಎಂ ಎಸ್.ಎಂ.ಕೃಷ್ಣ ಮನೆಗೆ ಯಶ್‌ ದಂಪತಿ ಭೇಟಿ

ಬೆಂಗಳೂರು: ನಟ ಯಶ್‌ ಹಾಗೂ ಪತ್ನಿ ರಾಧಿಕಾ ಪಂಡಿತ್‌ ಅವರಿಂದು ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ…

8 hours ago

ಬಾಲಿವುಡ್‌ ಖ್ಯಾತ ನಿರ್ದೇಶಕ ಶ್ಯಾಮ್‌ ಬೆನಗಲ್‌ ವಿಧಿವಶ

ಮುಂಬೈ: ಬಾಲಿವುಡ್‌ನ ಖ್ಯಾತ ನಿರ್ದೇಶಕ ಶ್ಯಾಮ್‌ ಬೆನಗಲ್‌ ಅವರಿಂದು ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ತಿಂಗಳುಗಳಿಂದ…

8 hours ago

ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧು ಮದುವೆಯ ಫೋಟೋಗಳು ವೈರಲ್‌

ಜೈಪುರ: ಭಾರತದ ಸ್ಟಾರ್ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧು ಅವರು ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದ…

9 hours ago

ರೈಲ್ವೆ ಹುದ್ದೆ ಪಡೆಯಲು ಕನ್ನಡಿಗರು ಆಸಕ್ತಿ ತೋರುತ್ತಿಲ್ಲ: ಸಚಿವ ವಿ.ಸೋಮಣ್ಣ

ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…

9 hours ago