ಬೆಂಗಳೂರು : ತನಿಖಾ ತಂಡಕ್ಕೆ ಘಟನೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿದೆ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ ವೇಳೆ ಸಚಿವರ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅಶ್ಲೀಲ ಪದ ಬಳಿಸಿದ್ದರು. ಈ ಕುರಿತು ಸಿಒಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿತ್ತು. ಇದರ ಭಾಗವಾಗಿ ಸಿಒಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಅಧಿಕಾರಿಗಳ ಎದುರು ಘಟನೆ ಬಗ್ಗೆ ವಿವರಣೆ ನೀಡಿರುವೆ ಎಂದರು.
ಪ್ರಕರಣದ ಬಗ್ಗೆ ಕಾನೂನು ಚೌಕಟ್ಟಿನಲ್ಲಿ ಏನಾಗಬೇಕು ಅದು ಆಗುತ್ತೆ. ನನಗೆ ಅನ್ಯಾಯ ಆಗಿದೆ, ಇದು ಇಡೀ ಮನುಕುಲಕ್ಕೆ ಆಗಿರುವ ಅನ್ಯಾಯ. ನನ್ನ ಜೊತೆ ಎಲ್ಲರೂ ನಿಂತುಕೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಪ್ರಕರಣವನ್ನು ಪ್ರತಿಷ್ಠೆಯಾಗಿ, ರಾಜಕೀಯವಾಗಿ ತೆಗೆದುಕೊಂಡಿಲ್ಲ. ನನಗೆ ಅನ್ಯಾಯ ಆಗಿದೆ. ಇದು ನನ್ನ ಸ್ವಾಭಿಮಾನದ ಪ್ರಶ್ನೆ. ತನಿಖೆ ಈಗಷ್ಟೇ ಆರಂಭವಾಗಿದೆ. ತನಿಖೆ ಸೂಕ್ತ ರೀತಿಯಲ್ಲಿ ನಡೆಯಲಿ. ಈ ಹಂತದಲ್ಲಿ ಹೆಚ್ಚು ಮಾತನಾಡುವುದು ಸರಿಯಲ್ಲ ಎಂದು ಸಚಿವರು ತಿಳಿಸಿದರು.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…