ರಾಜ್ಯ

ರವಿ ಪ್ರಕರಣ | ಸಿಐಡಿ ತನಿಖಾ ತಂಡಕ್ಕೆ ಘಟನೆಯ ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಂಗಳೂರು : ತನಿಖಾ ತಂಡಕ್ಕೆ ಘಟನೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿದೆ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ ವೇಳೆ ಸಚಿವರ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅಶ್ಲೀಲ ಪದ ಬಳಿಸಿದ್ದರು. ಈ ಕುರಿತು ಸಿಒಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿತ್ತು‌. ಇದರ ಭಾಗವಾಗಿ ಸಿಒಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಅಧಿಕಾರಿಗಳ ಎದುರು ಘಟನೆ ಬಗ್ಗೆ ವಿವರಣೆ ನೀಡಿರುವೆ ಎಂದರು‌.

ಪ್ರಕರಣದ ಬಗ್ಗೆ ಕಾನೂನು ಚೌಕಟ್ಟಿನಲ್ಲಿ ಏನಾಗಬೇಕು ಅದು ಆಗುತ್ತೆ. ನನಗೆ ಅನ್ಯಾಯ ಆಗಿದೆ, ಇದು ಇಡೀ ಮನುಕುಲಕ್ಕೆ ಆಗಿರುವ ಅನ್ಯಾಯ. ನನ್ನ ಜೊತೆ ಎಲ್ಲರೂ ನಿಂತುಕೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಪ್ರಕರಣವನ್ನು ಪ್ರತಿಷ್ಠೆಯಾಗಿ, ರಾಜಕೀಯವಾಗಿ ತೆಗೆದುಕೊಂಡಿಲ್ಲ. ನನಗೆ ಅನ್ಯಾಯ ಆಗಿದೆ. ಇದು ನನ್ನ ಸ್ವಾಭಿಮಾನದ ಪ್ರಶ್ನೆ. ತನಿಖೆ ಈಗಷ್ಟೇ ಆರಂಭವಾಗಿದೆ. ತನಿಖೆ ಸೂಕ್ತ ರೀತಿಯಲ್ಲಿ ನಡೆಯಲಿ. ಈ ಹಂತದಲ್ಲಿ ಹೆಚ್ಚು ಮಾತನಾಡುವುದು ಸರಿಯಲ್ಲ ಎಂದು ಸಚಿವರು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago