rcb
ಬೆಂಗಳೂರು: ರಾಜ್ಯ ಸರ್ಕಾರದ ಬುಡವನ್ನೇ ಅಲುಗಾಡಿಸಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ರಾಯಲ್ ಚಾಲೆಂಜ್‌ರ್ಸ ತಂಡ ಸಂತ್ರಸ್ತ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ.
ಸಂತ್ರಸ್ತ ಕುಟುಂಬಗಳಿಗೆ ನಾವು ನೀಡುತ್ತಿರುವುದು ಆರ್ಥಿಕ ನೆರವಲ್ಲ. ತಮ್ಮವರನ್ನು ಕಳೆದುಕೊಂಡವರ ಕುಟುಂಬಗಳಿಗೆ ನಾವು ಕೊಡುತ್ತಿರುವುದು ಕಾಳಜಿ ಮತ್ತು ಸಹಾನುಭೂತಿಯ ಫಲ ಎಂದು ಆರ್‌ಸಿಬಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಘೋಷಣೆ ಮಾಡಿದೆ.
ಕಳೆದ ಜೂ.4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಕೇಳಿ ನಮ್ಮ ಹೃದಯಗಳು ಛಿದ್ರವಾಗಿಸಿವೆ. ಈ ಘಟನೆ ಎಂದಿಗೂ ಮರೆಯಲು ಸಾಧ್ಯವೇ ಇಲ್ಲ.
ತಮ್ಮವರನ್ನು ಕಳೆದುಕೊಂಡವರಿಗೆ ಸಾಂತ್ವನ ಹೇಳಲು ನಮ್ಮಲ್ಲಿ ಪದಗಳಿಲ್ಲ. ನಾವು ನೀಡುತ್ತಿರುವ ಪರಿಹಾರ ನೊಂದ ಕುಟುಂಬವನ್ನು ಪರಿಹರಿಸುತ್ತದೆ ಎಂಬ ಭಾವನೆಯೂ ಇಲ್ಲ. ಆದರೆ ನಿಮ್ಮ ನೋವಿನಲ್ಲಿ ನಾವಿದ್ದೇವೆ. ನಿಮ್ಮ ಧ್ವನಿಗೆ ನಾವು ದನಿಯಾಗುತ್ತೇವೆ ಎಂದು ಹೇಳಿದೆ.
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಾಯಾತ್ರೆ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ…
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…
ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…