ಬೆಂಗಳೂರು: ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ನಡೆಯುವ RCB v/s GT ಐಪಿಎಲ್ ಪಂದ್ಯಕ್ಕೆ ನಮ್ಮ ಮೆಟ್ರೋ ಕಾರ್ಯಾಚರಣೆ ಅವಧಿಯನ್ನು ವಿಸ್ತರಣೆ ಮಾಡಿ ಕ್ರಿಕೆಟ್ ಪ್ರಿಯರಿಗೆ ಗುಡ್‌ನ್ಯೂಸ್ ನೀಡಿದೆ.
ಆರ್‌ಸಿಬಿ ತಂಡವೂ ತನ್ನ ತವರಿನಲ್ಲಿ ಚೊಚ್ಚಲ ಪಂದ್ಯವನ್ನು ಆಡಲು ಸಜ್ಜಾಗುತ್ತಿದೆ. ಬುಧವಾರದಂದು (ಏಪ್ರಿಲ್.2) ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್‌ಗೆ ಎದುರಾಳಿಯಾಗಿ ಗುಜರಾತ್ ಟೈಟನ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಬರುವ ಅಭಿಮಾನಿಗಳಿಗೆ ಮತ್ತು ಮೆಟ್ರೋ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಸಹ ಗುಡ್ ನ್ಯೂಸ್ ನೀಡಲು ಹೊರಟಿದೆ.
ಹೌದು.. ಬೆಂಗಳೂರಿನಲ್ಲಿ ನಡೆಯುವ ಎಲ್ಲಾ ಐಪಿಎಲ್ ಕ್ರಿಕೆಟ್ ಪಂದ್ಯಗಳಿಗೂ ನಮ್ಮ ಮೆಟ್ರೋ ಕಾರ್ಯಾಚರಣೆ ಅವಧಿಯನ್ನು ಮಧ್ಯ ರಾತ್ರಿ 12.30 ರವರೆಗೂ ವಿಸ್ತರಿಸಲಾಗಿದ್ದು, ಅಧಿಕ ಮಾಹಿತಿಗಾಗಿ ಮಾಧ್ಯಮ ಪ್ರಕಟಣೆಯನ್ನು ಪರಿಶೀಲಿಸಿ ಎಂದು ಬಿಎಂಆರ್‌ಸಿಎಲ್ ತನ್ನ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದೆ.
ಬಿಎಂಆರ್‌ಸಿಎಲ್ ಯ ಎಕ್ಸ್ ಸಂದೇಶದಲ್ಲಿ ಏನಿದೆ?






