ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್‌ಸಿಬಿ-ಸಿಎಸ್‌ಕೆ ಕ್ರಿಕೆಟ್ ಪಂದ್ಯ ವೀಕ್ಷಿಸಲು ಆಗಮಿಸಿದ ಸಿಎಂ ಸಿದ್ದರಾಮಯ್ಯ ಇಂದಿನ ನಿರ್ಣಾಯಕ ಪಂದ್ಯದಲ್ಲಿ ನಮ್ಮವರು ಗೆದ್ದು ಮುಂದಿನ ಹಂತಕ್ಕೆ ಹೋಗಲಿ ಎಂಬ ಹಾರೈಕೆ ನನ್ನದು ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
ಗೃಹ ಸಚಿವ ಪರಮೇಶ್ವರ್ ಸೇರಿದಂತೆ ಸಿದ್ದರಾಮಯ್ಯ ಸಂಪುಟದ ಕೆಲವು ಸಚಿವರು ಮ್ಯಾಚ್ ನೋಡಲು ಬಂದಿದ್ದಾರೆ.
ನಟ ಶಿವರಾಜ್‌ಕುಮಾರ್ ಕೂಡ ಪಂದ್ಯ ವೀಕ್ಷಿಸಲು ಆಗಮಿಸಿದ್ದು, ಗೆಲ್ಲೋದು ಆರ್‌ಸಿಬಿ ಹುಡುಗರೇ ಎಂದು ಟ್ವಿಟ್ ಮಾಡಿದ್ದಾರೆ. ಶಿವಣ್ಣ ಮಾತ್ರವಲ್ಲದೇ ರಿಷಬ್‌ಶೆಟ್ಟಿ ಹಾಗೂ ಇನ್ನಿತರರು ಪಂದ್ಯ ನೋಡಲು ಬಂದಿದ್ದಾರೆ.