ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಗೆ (ಎಸ್‌ಸಿ) ನೀಡಲಾಗಿದ್ದ ಒಳ ಮೀಸಲಾತಿಯ ಬಗ್ಗೆ ಪುನರ್ ಪರಿಶೀಲನೆ ನಡೆಸಲಾಗುವುದು ಎದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ಪರಿಶಿಷ್ಟ ಜಾತಿಗೆ ಕಾನೂನಾತ್ಮಕವಾಗಿ ಒಳಮೀಸಲಾತಿಯನ್ನು ನೀಡಿಲ್ಲ. ಹಾಗಾಗಿ, ಬಿಜೆಪಿ ನೀಡಿದ್ದ ಒಳ ಮೀಸಲಾತಿಯನ್ನು ಪುನರ್ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರ ಸದಾಶಿ ಆಯೋಗದ ವರದಿಯನ್ನು ತಿರಸ್ಕಾರ ಮಾಡಿತ್ತು. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಂಬಂಧ ಅಂತಿಮ ನಿರ್ಣಯ ಕೈಗೊಳ್ಳಲು ನಿರ್ಧರಿಸಲಾಗಿದ್ದು, ಕಾನೂನಾತ್ಮಕವಾಗಿ ಮೀಸಲಾತಿ ನೀಡುವಾಗ ನಾವೇ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಆಗುವುದಿಲ್ಲ. ಹಾಗಾಗಿ ಸಂವಿಧಾನ ತಿದ್ದುಪಡಿ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸುವ ಬಗ್ಗೆ ಇವತ್ತಿನ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.
ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ, ಅಧ್ಯಕ್ಷರ ನೇಮಕ ಪಟ್ಟಿ ಶೀಘ್ರದಲ್ಲೇ ಪ್ರಕಟವಾಗಲಿದೆ. ಮಾಧ್ಯಮಗಳಲ್ಲಿ ಬಂದ ಮೇಲೆ ಪ್ರಕಟಿಸಲೇ ಬೇಕಲ್ಲ ಎಂದರು.
ಸಂಸದ ಅನಂತಕುಮಾರ್ ಹೆಗಡೆ ವಿಚಾರಕ್ಕೆ ಸಂಬಂಧಿಸಿದಂತೆ, ನಾವು ಅನಂತ್ ಕುಮಾರ್ ವಿಷಯದಲ್ಲಿ ಸಂಯಮದಿಂದ ವರ್ತಿಸಬೇಕು. ಕೇಂದ್ರ ಸಚಿವರಾಗಿರುವ ಅವರು ಅರ್ಥಮಾಡಿಕೊಂಡು ಮಾತನಾಡಬೇಕು. ಇದು ಪೊಲೀಸರ ದೌರ್ಬಲ್ಯ ಅಲ್ಲ. ಇದೇ ರೀತಿ ಮಾತುಗಳನ್ನು ಮುಂದುವರೆಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಇನ್ನೂ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಸಚಿವರು, ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧೆ ಮಾಡುವ ವಿಚಾರ ಗೊತ್ತಿಲ್ಲ. ಈ ಬಗ್ಗೆ ಅವರೂ ನಮ್ಮೊಂದಿಗೆ ಚರ್ಚಿಸಿಲ್ಲ ಎಂದು ಹೇಳಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…