Mysore
29
haze

Social Media

ಸೋಮವಾರ, 27 ಏಪ್ರಿಲ 2026
Light
Dark

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಬೆಳಗಿನ ಪ್ರಾರ್ಥನೆ ಸಮಯದಲ್ಲಿ ಕನಿಷ್ಠ 10 ನಿಮಿಷ ಮಕ್ಕಳಿಗೆ ಸುದ್ದಿಪತ್ರಿಕೆ ಓದುವಂತೆ ಸೂಚನೆ ನೀಡಲಾಗಿದೆ.

ಡಿಜಿಟಲ್ ಯುಗದಲ್ಲಿ ಮಕ್ಕಳು ಹೆಚ್ಚಾಗಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಮಯ ಕಳೆಯುತ್ತಿರುವ ಹಿನ್ನೆಲೆಯಲ್ಲಿ, ಅವರ ಒಟ್ಟಾರೆ ಬೆಳವಣಿಗೆಯಲ್ಲಿ ಕೆಲವು ಹಿನ್ನಡೆಯ ಲಕ್ಷಣಗಳು ಕಂಡು ಬರುತ್ತಿವೆ. ವಿಶೇಷವಾಗಿ ಜ್ಞಾಪಕ ಶಕ್ತಿ ಕುಂದು, ಶ್ರವಣದೋಷ, ಹಾಗೂ ದೈಹಿಕ ಚಟುವಟಿಕೆಗಳಲ್ಲಿ ಆಸಕ್ತಿ ಕಡಿಮೆಯಾಗುತ್ತಿರುವುದು ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಲ್ಲಿ ಓದು ಅಭ್ಯಾಸ ಬೆಳೆಸಲು ದಿನಪತ್ರಿಕೆ ಓದುವಿಕೆಯನ್ನು ಉತ್ತೇಜಿಸುವ ಕ್ರಮ ಕೈಗೊಳ್ಳಲಾಗಿದೆ. ದಿನನಿತ್ಯ ಪತ್ರಿಕೆ ಓದುವುದರಿಂದ ಪ್ರಚಲಿತ ವಿದ್ಯಮಾನಗಳ ಅರಿವು ಹೆಚ್ಚುತ್ತದೆ ಸಾಮಾನ್ಯ ಜ್ಞಾನ ವೃದ್ಧಿಯಾಗುತ್ತದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಸುಲಭವಾಗುತ್ತದೆ ಶಬ್ದಕೋಶ, ಭಾಷಾ ಶೈಲಿ ಮತ್ತು ಬರವಣಿಗೆ ಕೌಶಲ್ಯ ಸುಧಾರಣೆ ಆಗುತ್ತದೆ. ಈ ಸಂಬಂಧ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಿಕ್ಷಣ ಇಲಾಖೆಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತ್ತು. ಆ ಪತ್ರದಲ್ಲಿನ ಅಂಶಗಳನ್ನು ಪರಿಶೀಲಿಸಿದ ಶಿಕ್ಷಣ ಇಲಾಖೆ, ನಿಯಮಾನುಸಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ಇದರಿಂದ ರಾಜ್ಯದ ಎಲ್ಲಾ ಶಾಲೆಗಳು ಹಾಗೂ ವಿವಿಧ ಇಲಾಖೆಗಳ ಅಡಿಯಲ್ಲಿ ನಡೆಯುವ ವಸತಿ ಶಾಲೆಗಳು ಮತ್ತು ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದುವುದು ಕಡ್ಡಾಯವಾಗಲಿದೆ.

Tags:
error: Content is protected !!