Mysore
24
haze

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಉತ್ತರ ಕರ್ನಾಟಕ ಹಾಗೂ ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ಸದನದಲ್ಲಿ ಉತ್ತರ ನೀಡಬೇಕಿದೆ. ಜೊತೆಗೆ ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು ಶಾಸಕ ಬಿ.ವೈ.ವಿಜಯೇದ್ರ ತಮಗೆ 150 ಕೋಟಿ ರೂ ಆಮಿಷ ಒಡ್ಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಡಿರುವ ಆರೋಪ ಸುಳ್ಳು ಎಂಬ ಮಾಣಿಪ್ಪಾಡಿ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಸ್ವತಃ ಮಾಣಿಪ್ಪಾಡಿ ಅವರೇ ಈ ಹಿಂದೆ ಆಮಿಷ ಒಡ್ಡಿದ್ದರು ಎಂದು ಹೇಳಿರುವುದರ ಮೇಲೆ ನಾವು ಪ್ರತಿಕ್ರಿಯೆ ನೀಡಿದ್ದೇವೆ. ಅವರೇ ಪತ್ರಿಕಾಗೋಷ್ಠಿ ಕರೆದು ನೀಡಿರುವ ಹೇಳಿಕೆಗೆ ನನ್ನ ಪ್ರಕಾರ ಪ್ರತಿಕ್ರಿಯೆ ನೀಡಿರುವುದು ಸರಿಯಾಗಿದೆ. ಈಗ ಬಹಳ ವರ್ಷಗಳ ನಂತರ ಹೇಳಿಲ್ಲ ಎನ್ನುತ್ತಿದ್ದಾರೆ. ಈ ಬಗ್ಗೆ ಏನು ಮಾಡಬೇಕು ಎಂದು ನೀವೇ ಹೇಳಿ ಎಂದು ಮಾಧ್ಯಮಗಳನ್ನೇ ಪ್ರಶ್ನೆ ಮಾಡಿದರು.

ಇನ್ನು ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹೋರಾಟದಲ್ಲಿ ಆಗಿರುವ ಅವಘಡಕ್ಕಾಗಿ ಸಿಎಂ ಕ್ಷಮೆ ಕೇಳಬೇಕು ಎಂಬ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿಕೆಗೆ ಕಿಡಿಕಾರಿದ ಅವರು, ಯಾರು ಸಮಸ್ಯೆಯನ್ನು ಇತ್ಯರ್ಥ ಮಾಡಿಲ್ಲವೋ, ಅವರೇ ಕ್ಷಮೆ ಕೇಳಲಿ ಎಂದು ತಿರುಗೇಟು ನೀಡಿದರು.

Tags: