ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ಸದನದಲ್ಲಿ ಉತ್ತರ ನೀಡಬೇಕಿದೆ. ಜೊತೆಗೆ ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು ಶಾಸಕ ಬಿ.ವೈ.ವಿಜಯೇದ್ರ ತಮಗೆ 150 ಕೋಟಿ ರೂ ಆಮಿಷ ಒಡ್ಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಡಿರುವ ಆರೋಪ ಸುಳ್ಳು ಎಂಬ ಮಾಣಿಪ್ಪಾಡಿ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಸ್ವತಃ ಮಾಣಿಪ್ಪಾಡಿ ಅವರೇ ಈ ಹಿಂದೆ ಆಮಿಷ ಒಡ್ಡಿದ್ದರು ಎಂದು ಹೇಳಿರುವುದರ ಮೇಲೆ ನಾವು ಪ್ರತಿಕ್ರಿಯೆ ನೀಡಿದ್ದೇವೆ. ಅವರೇ ಪತ್ರಿಕಾಗೋಷ್ಠಿ ಕರೆದು ನೀಡಿರುವ ಹೇಳಿಕೆಗೆ ನನ್ನ ಪ್ರಕಾರ ಪ್ರತಿಕ್ರಿಯೆ ನೀಡಿರುವುದು ಸರಿಯಾಗಿದೆ. ಈಗ ಬಹಳ ವರ್ಷಗಳ ನಂತರ ಹೇಳಿಲ್ಲ ಎನ್ನುತ್ತಿದ್ದಾರೆ. ಈ ಬಗ್ಗೆ ಏನು ಮಾಡಬೇಕು ಎಂದು ನೀವೇ ಹೇಳಿ ಎಂದು ಮಾಧ್ಯಮಗಳನ್ನೇ ಪ್ರಶ್ನೆ ಮಾಡಿದರು.
ಇನ್ನು ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹೋರಾಟದಲ್ಲಿ ಆಗಿರುವ ಅವಘಡಕ್ಕಾಗಿ ಸಿಎಂ ಕ್ಷಮೆ ಕೇಳಬೇಕು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಕಿಡಿಕಾರಿದ ಅವರು, ಯಾರು ಸಮಸ್ಯೆಯನ್ನು ಇತ್ಯರ್ಥ ಮಾಡಿಲ್ಲವೋ, ಅವರೇ ಕ್ಷಮೆ ಕೇಳಲಿ ಎಂದು ತಿರುಗೇಟು ನೀಡಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…