ಬೆಂಗಳೂರು: ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ, ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಸಿದ್ಧನಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ಇಂದು(ಮೇ.೨೫) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನನಗೆ ಕೊಟ್ಟರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಅಧ್ಯಕ್ಷರ ಬದಲಾವಣೆ ಸನ್ನೀವೇಶ ಎದುರಾದರೆ ನಾನು ಸಿದ್ದ. ಜೊತೆಗೆ ಮುಂದೆ ಯಾವುದೇ ಚುನಾವಣೆಗೆ ನಿಲ್ಲುವುದಿಲ್ಲ. ಪಕ್ಷಕ್ಕಾಗಿ ತನು, ಮನ ಅರ್ಪಿಸುತ್ತೇನೆ ಎಂದರು.
ವಿಧಾನಪರಿಷತ್ ಚುನಾವಣೆಯಲ್ಲಿ ಅವಕಾಶ ವಂಚಿತರಿಗೆ ಟಿಕೆಟ್ ಕೊಡಬೇಕು. ಯಾರಿಗೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ ಅಥವಾ ಈವರೆಗೂ ವಿಧಾನಪರಿಷತ್, ವಿಧಾನಸಭೆಯಲ್ಲಿ ಪ್ರಾತಿನಿಧ್ಯ ದೊರೆಯದೆ ಇರುವ ತಳ ಸಮುದಾಯದವರಿಗೆ ಅವಕಾಶ ನೀಡಬೇಕು. ನನ್ನ ಕಡೆಯಿಂದ ಯಾವ ಅಭ್ಯರ್ಥಿಯೂ ಇಲ್ಲ ಎಂದು ಪ್ರತಿಪಾದಿಸಿದರು.
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಹಾಗೂ ಇತರೆ ಎಲ್ಲ ಕಡೆಯು ಧ್ರುವೀಕರಣ ಆಗಬಹುದು ಎಂದು ಸಚಿವರು ತಿಳಿಸಿದ್ದಾರೆ.
ಈ ವೇಳೆ ಡ್ರಗ್ಸ್ ಕುರಿತು ಮಾತನಾಡಿದ ಅವರು, ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ಹೆಚ್ಚುತ್ತಲೇ ಇದೆ. ಮಾದಕ ವಸ್ತುಗಳ ಪಿಡುಗನ್ನು ತಪ್ಪಿಸಲು ನಿರಂತರ ಕಾರ್ಯಾಚರಣೆ ನಡೆಯುತ್ತಿದೆ. ಮತ್ತಷ್ಟು ಕ್ರಮಗಳು ಅಗತ್ಯ ಎಂದು ಹೇಳಿದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…