Mysore
20
broken clouds

Social Media

ಗುರುವಾರ, 13 ನವೆಂಬರ್ 2025
Light
Dark

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಡಲು ಸಿದ್ಧ : ಸಚಿವ ದಿನೇಶ್‌ ಗುಂಡೂರಾವ್‌

dinesh gundurao

ಬೆಂಗಳೂರು : ಸಂಪುಟ ಪುನರ್‌ರಚನೆ ಕುರಿತು ನಡೆಯುತ್ತಿರುವ ಚರ್ಚೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡುರಾವ್‌ ಹೇಳಿಕೆ ಮತ್ತಷ್ಟು ಪುಷ್ಠಿ ನೀಡಿದ್ದು, ಸಚಿವ ಸ್ಥಾನ ಬಿಡುವಂತೆ ಹೈಕಮಾಂಡ್‌ ಕೇಳಿದರೆ, ಬಿಡಲು ಸಿದ್ಧ ಎಂದು ಅವರು ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ವಿಚಾರವಾಗಿ ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಮುಖ್ಯಮಂತ್ರಿಗಳ ಮನೆಯಲ್ಲಿ ಸೋಮವಾರ ರಾತ್ರಿ ನಡೆದ ಔತಣಕೂಟದಲ್ಲಿ ಸಚಿವ ಸಂಪುಟ ಪುನಾರಚನೆಯ ವಿಚಾರ ಚರ್ಚೆಯೇ ಆಗಿಲ್ಲ. ಎಲ್ಲ ಇಲಾಖೆಯ ಸಚಿವರು ತಮ್ಮ ಇಲಾಖೆಗಳಲ್ಲಿ ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:-ಜಾಬ್ ಕಾರ್ಡ್‌ಗಳಿಗೆ ಇ-ಕೆವೈಸಿ ಕಡ್ಡಾಯ

ನಾನು ಸಂಘದ ನಿಷೇಧದ ಬಗ್ಗೆ ಏನನ್ನೂ ಪ್ರತಿಕ್ರಿಯಿಸಲ್ಲ. ಆದರೆ, ಸರ್ಕಾರಿ ಶಾಲೆಗಳ ಆವರಣದಲ್ಲಿ ಚಟುವಟಿಕೆ ನಡೆಯಬಾರದೆಂಬುದಕ್ಕೆ ನನ್ನ ಬೆಂಬಲವಿದೆ ಎಂದ ಅವರು, ಆರ್‌ಎಸ್‌ಎಸ್‌ ತಮ್ಮದು ಸರ್ಕಾರಿ ಸಂಘಟನೆಯಲ್ಲ ಎಂದು ಹೇಳಿ, ರಾಜಕೀಯದಲ್ಲಿಯೇ ತೊಡಗಿ ಹೋಗಿದ್ದಾರೆ ಎಂಬ ಸಂಗತಿ ಇಡೀ ದೇಶಕ್ಕೆ ತಿಳಿದಿದೆ. ಹಾಗಾಗಿ ಸರ್ಕಾರಿ ಕಟ್ಟಡಗಳು, ಅದರ ಆವಾರಗಳಲ್ಲಿ ಚಟುವಟಿಕೆಗಳು ನಡೆಯದಂತೆ ನಿಷೇಧ ಹೇರುವುದು ಸರಿಯಾದ ಕ್ರಮ ಎಂದರು.

Tags:
error: Content is protected !!