ರಾಜ್ಯ

ರಾಜೀನಾಮೆ ಕೊಡಲು ಸಿದ್ಧ ಎಂದ ಗೃಹ ಸಚಿವ ಪರಮೇಶ್ವರ್‌

ತುಮಕೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾದ ಬೆನ್ನಲ್ಲೇ ಈಗ ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿಕೆಯೊಂದು ಭಾರೀ ಸಂಚಲನ ಮೂಡಿಸಿದೆ.

ತುಮಕೂರಿನಲ್ಲಿಂದು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ನೀವೆಲ್ಲ ಸೇರಿ ದೊಡ್ಡ ಮನಸ್ಸು ಮಾಡಿ ನನ್ನ ರಾಜೀನಾಮೆ ಕೇಳಿದ್ರೆ ಕೊಡೋಕೆ ರೆಡಿ ಇದ್ದೀನಿ ಎಂದು ಹೇಳುವ ಮೂಲಕ ಕಾರ್ಯಕರ್ತರಿಗೆ ಬಿಗ್‌ ಶಾಕ್‌ ನೀಡಿದ್ದಾರೆ.

ಇತ್ತೀಚೆಗೆ ಕ್ಷೇತ್ರದ ಕಾರ್ಯಕರ್ತರ ಜೊತೆ ಬೆರೆಯಲು ಸಾಧ್ಯವಾಗುತ್ತಿಲ್ಲ. ನಿಮ್ಮ ಮನಸ್ಸಿನ ಆಕಾಂಕ್ಷೆಯಂತೆ ಸ್ಪಂದಿಸಲು ಆಗುತ್ತಿಲ್ಲ. ಇದಕ್ಕಾಗಿ ಕ್ಷಮೆ ಕೇಳುತ್ತೇನೆ. ನೀವು ಹೇಳಿದರೆ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲು ಸಿದ್ಧ ಎಂದು ಹೇಳಿದ್ದಾರೆ.

ಗೃಹ ಸಚಿವ ಪರಮೇಶ್ವರ್‌ ಅವರ ಹೇಳಿಕೆಯಿಂದ ಕಾರ್ಯಕರ್ತರು ಹಾಗೂ ಮುಖಂಡರು ವಿಚಲಿತರಾದ ಘಟನೆ ನಡೆಯಿತು.

ಈ ವೇಳೆ ಮಾತನಾಡಿದ ಕಾರ್ಯಕರ್ತರು ದಯವಿಟ್ಟು ತಕ್ಷಣ ರಾಜೀನಾಮೆ ಕೊಡಬೇಡಿ ಎಂದು ಕೂಗಿ ಪರಮೇಶ್ವರ್‌ ಅವರನ್ನು ತಡೆದರು.

ಸಿಎಂ ಹಾಗೂ ಕೆಪಿಸಿಸಿ ಬದಲಾವಣೆ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಗೃಹ ಸಚಿವರ ಈ ಹೇಳಿಕೆ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದುನೋಡಬೇಕಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

2 mins ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

7 mins ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

23 mins ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

2 hours ago

ಓದುಗರ ಪತ್ರ: ಫ್ಲೆಕ್ಸ್ ಮುಕ್ತವೆಂಬುದು ಸಾಂಪ್ರದಾಯಿಕ ಮಾತಾಗಬಾರದಲ್ಲವೇ?

ಮೈಸೂರು ನಗರವನ್ನು ಫ್ಲೆಕ್ಸ್ ಮುಕ್ತವಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿರುವುದು ಸ್ವಾಗತಾರ್ಹವಾಗಿದೆ. ದಸರಾ ಸಮಯದಲ್ಲಿ ಮೈಸೂರಿನಲ್ಲಿ ತಮ್ಮದೂ ಸೇರಿದಂತೆ ಯಾರ ಫ್ಲೆಕ್ಸ್ ಅಥವಾ…

2 hours ago

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

6 hours ago