ರಾಜ್ಯ

ನಿಜವಾದ ಅಕ್ರಮ ನಡೆದಿರುವುದು ಕಾಂಗ್ರೆಸ್‌ ನಾಯಕತ್ವದಲ್ಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಚುನಾವಣಾ ಸೋಲುಗಳನ್ನು ಜೀರ್ಣಿಸಿಕೊಳ್ಳಲಾಗದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪದೇ ಪದೇ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಅಕ್ರಮದ ಆರೋಪ ಮಾಡುತ್ತಲೇ ಬಂದಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಚುನಾವಣಾ ಆಯೋಗ ಕೂಡಾ ರಾಹುಲ್ ಆರೋಪವನ್ನು ತಳ್ಳಿಹಾಕಿ ಕಾನೂನು ಮಾರ್ಗದಲ್ಲೇ ಚುನಾವಣೆ ನಡೆದಿದೆ ಎಂದು ಸ್ಪಷ್ಟನೆ ನೀಡಿದ್ದರೂ ಆಕ್ಷೇಪ ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಸೋಲುಗಳಿಗೆ ಚುನಾವಣಾ ಆಯೋಗವನ್ನು ದೂರುವುದು ಬಿಟ್ಟು ದೇಶ ವಿರೋಧಿ ಚಿಂತನೆಗಳನ್ನು, ಉಗ್ರರನ್ನು ಬೆಂಬಲಿಸುವ ನೀತಿಗಳನ್ನು, ಅತಿಯಾದ ಮುಸಲ್ಮಾನರ ಓಲೈಕೆ ನೀತಿಗಳನ್ನು, ಹಿಂದೂ ವಿರೋಧಿ ನೀತಿಗಳನ್ನು ಕಾಂಗ್ರೆಸ್ ಪಕ್ಷ ತ್ಯಜಿಸಲಿ ಎಂದು ಆಗ್ರಹಿಸಿದ್ದಾರೆ.

ನಿಜವಾಗಿಯೂ ಅಕ್ರಮ ನಡೆದಿರುವುದು ಕಾಂಗ್ರೆಸ್ ನಾಯಕತ್ವದಲ್ಲಿ. ನಕಲಿ ಗಾಂಧಿ ಕುಟುಂಬಕ್ಕೆ ಮಣೆ ಹಾಕಿದ್ದು, ಚುನಾವಣೆ ಎಂದರೇನು, ರಾಜಕೀಯ ಎಂದರೇನು ಎಂದರಿಯದ ಎಳಸುಗಳಿಗೆ ಕಾಂಗ್ರೆಸ್ ನಾಯಕತ್ವ ನೀಡಿದ್ದೇ ಚುನಾವಣಾ ಸೋಲುಗಳಿಗೆ ಕಾರಣ. ಈಗ ಹಿರಿಯ ನಾಯಕರೊಬ್ಬರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ ಬೆದರುಬೊಂಬೆಯಾಗಿ ನಿಲ್ಲಿಸಿದ್ದಾರೆ. ಅಧಿಕಾರ ಎಲ್ಲವೂ ಈಗಲೂ ನಕಲಿ ಗಾಂಧಿಗಳ ಕೈಯಲ್ಲಿದೆ. ಹೀಗಾಗಿಯೇ ದೇಶದ ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುತ್ತಿದ್ದಾರೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

7 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

8 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

8 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

9 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

9 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

9 hours ago