ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ವಿಚಾರಣೆ ಎದುರಿಸುತ್ತಿರುವ ನಟಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಪೊಲೀಸರು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು ವಿವಿಧೆಡೆ ಸ್ಥಳ ಮಹಜರು ಮಾಡಲಾಗುತ್ತಿದೆ. ಪವಿತ್ರಾ ಗೌಡ ಮನೆಯಲ್ಲೂ ಸಹ ಸ್ಥಳ ಮಹಜರು ನಡೆಸಲಾಗಿದ್ದು, ಪಟ್ಟಣಗೆರೆ ಶೆಡ್‌ಗೂ ಸಹ ಕರೆತರಲಾಗಿತ್ತು.
ಹೀಗೆ ಬಂಧನಕ್ಕೊಳಗಾದ ದಿನದಿಂದ ಇಲ್ಲಿಯವರೆಗೂ ಸತತವಾಗಿ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸಿ ಹೈರಾಣಾಗಿರುವ ಪವಿತ್ರಾ ಗೌಡ ಆರೋಗ್ಯದಲ್ಲ ಏರುಪೇರಾಗಿದ್ದು, ಠಾಣೆಗೆ ವೈದ್ಯರನ್ನು ಕರೆಸಿ ನಂತರ ಮುಂದಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆ ಬಳಿಕ ಮತ್ತೆ ಠಾಣೆಗೆ ಪವಿತ್ರಾ ಗೌಡ ವಾಪಸ್ ಆಗಿದ್ದಾರೆ.