ರಾಜ್ಯ

ಜಾತಿಗಣತಿ ವರದಿ ಸ್ವೀಕರಿಸಿ: ಸಿಎಂಗೆ ಮಠಾಧೀಶರ ಒತ್ತಾಯ

ಬೆಂಗಳೂರು: ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕೆಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ಶನಿವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದ್ದಾರೆ.

ಶ್ರಮಿಕ ವರ್ಗದವರಿಗೆ ಕಾಂಗ್ರೆಸ್‌ನ ಗ್ಯಾರೆಂಟಿ ಯೋಜನೆಯಿಂದ ಹೆಚ್ಚು ಉಪಯೋಗವಾಗುತ್ತಿದೆ ಎಂದು ಕಾಂಗ್ರೆಸ್‌ ಗ್ಯಾರೆಂಟಿಗಳನ್ನು ಶ್ಲಾಘಿಸಿದರು. ಹಾಗೂ ಇದೇ ಸಂದರ್ಭದಲ್ಲಿ ಮಠಗಳಿಗೆ ಜಮೀನು ನೀಡುವ ಕುರಿತು ಸ್ವಾಮೀಜಿಗಳು ಪ್ರಸ್ತಾಪಿಸಿದರು. ಸಿಎಂ ಈ ಬಗಗೆ ತಹಶೀಲ್ದಾರರಿಗೆ ಹಾಗೂ ದೂರವಾಣಿ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗೆ ದೂರವಾಣಿ ಮೂಲಕ ಶೀಘ್ರ ವರದಿ ನೀಡುವಂತೆ ಸೂಚಿಸಿದರು.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ವರದಿ ನೀಡಲು ಎರಡು ತಿಂಗಳುಗಳ ಕಾಲ ಅವಧಿ ವಿಸ್ತರಣೆಯಾಗಿದೆ. ಕಾಂತರಾಜು ವರದಿಯನ್ನು ನೀಡಲು ಜಯಪ್ರಕಾಶ್‌ ಹೆಗ್ಡೆಯವರು ನಿರಾಕರಿಸಿದ್ದಾರೆ. ಜಾತಿ ಗಣತಿ ವರದಿ ಬಗ್ಗೆ ಕಾನೂನು ಸಲಹೆ ಪಡೆದು ಮುಂದುವರೆಯಲಾಗುವುದು ಎಂದು ಹೇಳಿದರು.

ಭೋವಿ ಸಮುದಾಯ ಚಿತ್ರದುರ್ಗದ ಸಿದ್ದರಾಮೇಶ್ವರ ಸ್ವಾಮೀಜಿ, ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಶ್ರೀಗಳು ಹಾಗೂ ಹಿಂದುಳಿದ ಜಾತಿಗಳ ಮಠಗಳ ಸ್ವಾಮೀಜಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ. ದಯಾನಂದ ಇತರರು ಹಾಜರಿದ್ದರು.

andolanait

Recent Posts

ಕುಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್‌ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್‌…

19 mins ago

ಕೇರಳ ಸಿಎಂ, ಕೆ.ಸಿ.ವೇಣುಗೋಪಾಲ್‌ ಜೊತೆ ವೇದಿಕೆ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಕೇರಳ: ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಅಕ್ರಮ ಒತ್ತುವರಿ ತೆರವು ಸಂಬಂಧಪಟ್ಟಂತೆ ಅನಪೇಕ್ಷಣೀಯವಾದಂತಹ ಹೇಳಿಕೆ ನೀಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ…

52 mins ago

ಹೊಸ ವರ್ಷಾಚರಣೆ: ಮೈಸೂರಿಗೆ ಲಗ್ಗೆಯಿಟ್ಟ ಪ್ರವಾಸಿಗರು

ಮೈಸೂರು: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೌಂಟ್‌ಡೌನ್‌ ಶುರುವಾಗಿದ್ದು, ನ್ಯೂ ಇಯರ್‌ ಆಚರಿಸಲು ಪ್ರವಾಸಿಗರು ಮೈಸೂರಿಗೆ ಲಗ್ಗೆಯಿಟ್ಟಿದ್ದಾರೆ. ಜಗತ್ಪ್ರಸಿದ್ಧ ಮೈಸೂರು ಅರಮನೆಗೆ…

1 hour ago

ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ

ಬಳ್ಳಾರಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನಿಗೆ ಸಿಬಿಐ ಶಾಕ್‌ ನೀಡಿದ್ದು, ಬಳ್ಳಾರಿಯಲ್ಲಿ ವಿಶ್ವನಾಥ್‌…

1 hour ago

ಪೈರಸಿ ವಿರುದ್ಧ ನಟ ಜಗ್ಗೇಶ್‌ ಸಮರ: ಓರ್ವನ ಬಂಧನ

ಬೆಂಗಳೂರು: ಪೈರಸಿ ವಿರುದ್ಧ ನವರಸ ನಾಯಕ ಜಗ್ಗೇಶ್‌ ಸಮರ ಸಾರಿದ್ದು, ಕೋಣ ಸಿನಿಯಾ ಪೈರಸಿ ವಿರುದ್ಧ ಚಂದ್ರಾ ಲೇಔಟ್‌ ಪೊಲೀಸ್‌…

3 hours ago

ಹೊಸ ವರ್ಷ ಆಚರಣೆಗೆ ಮಂಡ್ಯ ಜಿಲ್ಲೆ ಸಜ್ಜು: ಕಾವೇರಿ ತೀರದಲ್ಲಿ ನಿಷೇಧಾಜ್ಞೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೊಸ ವರ್ಷ ಆಚರಣೆಗೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಪ್ರಮುಖವಾಗಿ…

3 hours ago