ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರೆಯುವ ಬಗ್ಗೆ ಹೈಕಮಾಂಡ್ ಶೀಘ್ರದಲ್ಲೇ ಸ್ಪಷ್ಟನೆ ನೀಡಲಿದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ,
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗಂತೂ ಸ್ಪಷ್ಟನೆ ಸಿಕ್ಕಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ ಎಂದು ಹೇಳಿದರು.
ಇನ್ನು ಬಿಹಾರ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಬಿಜೆಪಿಗೆ ಆನೆ ಬಲ ಬಂದಂತಾಗಿದೆ. ಬಿಹಾರದ ಜನತೆ ಎನ್‌ಡಿಎ ಮೈತ್ರಿಕೂಟಕ್ಕೆ ಆಶೀರ್ವಾದ ಮಾಡಿದ್ದಾರೆ ಎಂದು ಬಿಹಾರ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಚುನಾವಣೆ ಮುಗಿಯುವವರೆಗೂ ವೋಟ್ ಚೋರಿ ಆರೋಪ ಮಾಡಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದರು. ಆದರೆ ಇದು ಜನತೆಯ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಫಲಿತಾಂಶದ ಮೂಲಕ ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.





