ರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುವ ಸ್ಪಷ್ಟನೆ ಸಿಕ್ಕಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರೆಯುವ ಬಗ್ಗೆ ಹೈಕಮಾಂಡ್‌ ಶೀಘ್ರದಲ್ಲೇ ಸ್ಪಷ್ಟನೆ ನೀಡಲಿದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ,

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗಂತೂ ಸ್ಪಷ್ಟನೆ ಸಿಕ್ಕಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ ಎಂದು ಹೇಳಿದರು.

ಇನ್ನು ಬಿಹಾರ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಬಿಜೆಪಿಗೆ ಆನೆ ಬಲ ಬಂದಂತಾಗಿದೆ. ಬಿಹಾರದ ಜನತೆ ಎನ್‌ಡಿಎ ಮೈತ್ರಿಕೂಟಕ್ಕೆ ಆಶೀರ್ವಾದ ಮಾಡಿದ್ದಾರೆ ಎಂದು ಬಿಹಾರ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಚುನಾವಣೆ ಮುಗಿಯುವವರೆಗೂ ವೋಟ್‌ ಚೋರಿ ಆರೋಪ ಮಾಡಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದರು. ಆದರೆ ಇದು ಜನತೆಯ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಫಲಿತಾಂಶದ ಮೂಲಕ ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

3 mins ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

6 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

6 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

7 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

8 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

14 hours ago