Mysore
27
overcast clouds

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಕಲಬುರ್ಗಿ ತೊಗರಿಗೆ ಹೆಚ್ಚಿನ ಬೆಂಬಲ ಬೆಲೆಗೆ ರಾಜ್ಯದಿಂದ ಶಿಫಾರಸು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಬೆಳಗಾವಿ: ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ತೊಗರಿಗೆ ಜಿ.ಐ.ಟ್ಯಾಗ್ ಪ್ರಮಾಣಪತ್ರ ದೊರೆತಿದ್ದು, ಇದಕ್ಕೆ ಶೇಕಡಾ 20-25ರಷ್ಟು ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರದ ಕೃಷಿ ವೆಚ್ಚ ಮತ್ತು ಬೆಲೆ ಆಯೋಗವನ್ನು ಕೋರಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಈ ಬಗ್ಗೆ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ಮಾಹಿತಿ ನೀಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಘೋಷಣೆ ಮಾಡುತ್ತದೆ. ಕೃಷಿ ವೆಚ್ಚ ಮತ್ತು ಬೆಲೆ ಆಯೋಗವು ಪ್ರತಿ ವರ್ಷ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆಗಳಿಗೆ ವಿವಿಧ ರಾಜ್ಯಗಳಲ್ಲಿ ಉತ್ಪಾದನಾ ವೆಚ್ಚ ವಿವರಗಳನ್ನು ಕೃಷಿ ವಿಶ್ವವಿದ್ಯಾನಿಲಯಗಳ ಸಹಯೋಗದಲ್ಲಿ ಲೆಕ್ಕಾಚಾರ ಮಾಡುತ್ತದೆ.

ಜೊತೆಗೆ ಎಲ್ಲಾ ರಾಜ್ಯ ಸರ್ಕಾರಗಳಿಂದ ಬೆಳೆಗಳ ಉತ್ಪಾದನಾ ವೆಚ್ಚದ ಮಾಹಿತಿ ಪಡೆದು, ತಜ್ಞರು, ಅಧಿಕಾರಿಗಳು ಮತ್ತು ರೈತರೊಂದಿಗೆ ಚರ್ಚಿಸಿ, ಉತ್ಪಾದನಾ ವೆಚ್ಚದ ವಿವರಗಳನ್ನು ಒಳಗೊಂಡ ಬೆಲೆ ನೀತಿ ವರದಿಯನ್ನು ತಯಾರಿಸಲಾಗುತ್ತದೆ ಎಂದು ಹೇಳಿದರು.

ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಪ್ರತಿ ವರ್ಷ ತೊಗರಿ ಬೆಳೆಗೆ ಹೆಚ್ಚಿನ ಬೆಂಬಲ ಬೆಲೆಗೆ ಶಿಫಾರಸ್ಸು ಮಾಡಲಾಗುತ್ತಿದೆ. ಅದರ ಅನ್ವಯದಂತೆ ವಿವಿಧ ಮಾನದಂಡಗಳನ್ನು ಅನುಸರಿಸಿ ಬೆಂಬಲ ಬೆಲೆ ನಿಗದಿಯಾಗಲಿದೆ ಎಂದು ವರ್ಷವಾರು ಅಂಕಿ ಅಂಶಗಳೊಂದಿಗೆ ಮಾಹಿತಿ ನೀಡಿದರು.

Tags:
error: Content is protected !!