Mysore
29
few clouds

Social Media

ಸೋಮವಾರ, 23 ಮಾರ್ಚ್ 2026
Light
Dark

ಕುವೆಂಪು ಅವರಿಗೆ ಭಾರತ ರತ್ನ ನೀಡಲು ಕೇಂದ್ರಕ್ಕೆ ಶಿಫಾರಸು

Kuvempu

ಬೆಂಗಳೂರು : ಕನ್ನಡಕ್ಕೆ ಮೊಟ್ಟ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಯಾದ ಭಾರತ ರತ್ನ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು

ಕುವೆಂಪು ಅವರಿಗೆ ಭಾರತ ರತ್ನ ಮರಣೋತ್ತರ ಪ್ರಶಸ್ತಿ ನೀಡಬೇಕೆಂಬುದು ಕನ್ನಡಿಗರ ಒತ್ತಾಸೆಯಾಗಿದೆ. ಇದನ್ನು ಮನಗಂಡು ಕೇಂದ್ರ ಸರ್ಕಾರಕ್ಕೆ ಪ್ರಶಸ್ತಿ ನೀಡಲು ಶಿಫಾರಸು ಮಾಡಲಾಗಿದೆ ಎಂದು ಪಾಟೀಲ್ ಅವರು
ತಿಳಿಸಿದರು.

Tags:
error: Content is protected !!